ಕೊಡಗು : ಕುಶಾಲನಗರ ತಾಲೂಕಿನ ಕೂಡ್ಲೂರು ಬಡಾವಣೆಯಲ್ಲಿ ನಿರ್ಮಿಸಲಾಗಿದ್ದ ಸಿಎನ್‌ಜಿ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು, ಸ್ಥಳೀಯ ನಿವಾಸಿಗಳಿಗೆ ಉಸಿರಾಟ ಸಮಸ್ಯೆಯಾಗಿ, ಆರೋಗ್ಯದಲ್ಲಿ ಏರುಪೇರಾಗಿದೆ.
ಕೂಡ್ಲೂರು ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಸಿಎನ್ ಜಿ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು, ಪರಿಣಾಮ ಸುತ್ತಮುತ್ತಲಿನ ಪ್ರದೇಶಕ್ಕೆ ವ್ಯಾಪಿಸಿದ ಹಿನ್ನಲೆ ಉಸಿರಾಟದ ಸಮಸ್ಯೆ, ತಲೆನೋವು, ಮಕ್ಕಳಲ್ಲಿ ವಾಂತಿ, ವಾಕರಿಕೆ ಹಾಗೂ ಅಸ್ವಸ್ಥತೆ ಉಂಟಾಗಿದೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಕಿರಣ್ ಗೌರಯ್ಯ ಪರಿಶೀಲನೆ ನಡೆಸಿದ್ದು, ಈ ವೇಳೆ ಘಟಕದ ಸಿಬ್ಬಂದಿಯ ಜೊತೆ ಕೇಳಿದಾಗ ಲೀಕೇಜ್ ಟೆಸ್ಟಿಂಗ್ ಮಾಡುವ ವೇಳೆ ಈ ರೀತಿಯಾಗಿದೆ ಎಂದು ತಿಳಿಸಿದರು, ಈ ಬಗ್ಗೆ ಮುಂಚಿತವಾಗಿ ಯಾವುದೇ ಜಾಗೃತಿ ಹಾಗೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾದ ಕಾರಣ ಈ ಅವಘಡ ಸಂಭವಿಸಿದೆ ಎಂದು ಕಿರಣ್ ಗೌರಯ್ಯ ತಿಳಿಸಿದರು.