ಕೊಡಗು: ತಾಂತ್ರಿಕ ದೋಷದಿಂದ ಸ್ವಿಫ್ಟ್‌ ಕಾರು ಹೊತ್ತಿ ಉರಿದಿದ ಘಟನೆ ಮಡಿಕೇರಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 275ರ ಸಂಪಿಗೆ ಕಟ್ಟೆ ಬಳಿ ನಡೆದಿದೆ.

ಮಡಿಕೇರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಕಾರು ಸುಟ್ಟು ಕರಕಲಾಗಿದೆ. ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶನಿವಾರ ಬೆಳಗ್ಗೆ ಅಪಘಾತವಾಗಿದ್ದ ಕಾರನ್ನು ಹೆದ್ದಾರಿ ಬದಿ ನಿಲ್ಲಿಸಲಾಗಿತ್ತು. ಸಂಜೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಗಳೂರಿನ ಶ್ರೀನಿವಾಸ್ ಎಂಬುವವರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಂಡ ತಕ್ಷಣ ಕಾರಿನಲ್ಲಿದ್ದವರು ಹೊರಗಡೆ ಬಂದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮ‌ಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ‌ ನಂದಿಸಿದರು. ಮಡಿಕೇರಿ ಸಂಚಾರಿ ಪೊಲೀಸರು ಹಾಗೂ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.