ಕೊಡಗು : ಜಿಲ್ಲೆಯಲ್ಲಿ ಮೋಡ ಬಿತ್ತನೆ ಆಗಿದೆ ಎಂಬ ಚರ್ಚೆ ವಿಚಾರವಾಗಿ ಜಲಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮೋಡ ಬಿತ್ತನೆ ಆರಂಭ ಆಗಿಲ್ಲ. ಬಹುಶಃ ಇನ್ನು ನಾಲ್ಕು ದಿನಗಳಲ್ಲಿ ಮೋಡ ಬಿತ್ತನೆ ಆರಂಭಗೊಳ್ಳುವ ಸಾಧ್ಯತೆ ಇದೆ. ನಿನ್ನೆ ಬೆಂಗಳೂರಿನ ಸಚಿವರ ನಿವಾಸದಲ್ಲಿ ಕೊಡಗು ಭೂ ಪ್ರದೇಶದ ಮೇಲಿನ ಮೋಡ ಬಿತ್ತನೆ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಎಲ್ಲೆಡೆ ಮೋಡ ಕವಿದ ವಾತಾವರಣ ಹಾಗೂ ರಭಸದ ಮಳೆ ಆಗುತ್ತಿದೆ. ಕೊಡಗಿನಲ್ಲಿ ಈಗಾಗಲೇ ಮೋಡ ಬಿತ್ತನೆ ನಡೆಯುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಆದರೆ, ಮೋಡ ಬಿತ್ತನೆ ಆರಂಭಗೊಂಡಿಲ್ಲ. ಬಹುಶಃ ಉತ್ತಮ ನೈಸರ್ಗಿಕ ಮಳೆಯಾದಲ್ಲಿ ಮೋಡ ಬಿತ್ತನೆ ಕಾರ್ಯವನ್ನು ಮುಂದೂಡುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.

