ಕೊಡಗು: ಕಾಫಿ ತೋಟದಲ್ಲಿ ಹುಲಿ ಮೃತದೇಹ ಪತ್ತೆಯಾದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ವೆಷ್ಣಾಮಲೆ ಗ್ರಾಮದಲ್ಲಿ ನಡೆದಿದೆ.
ಹುಲಿಯು ವಯಸ್ಸಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಮತ್ತು ಅರಣ್ಯ ಆಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ.

