ಕೊಡಗು : ಧಾರಾಕಾರ ಮಳೆ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ನದಿಗಳು ಮೈದುಂಬಿ ಹರಿಯುತ್ತಿದೆ. ಕೃಷಿ ಭೂಮಿ, ತಗ್ಗು ಪ್ರದೇಶಗಳು ಜಲಾವೃತವಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಜೋರು ಮಳೆಗೆ ಕೊಡಗಿನ ಶ್ರೀಮಂಗಲ ಟೌನ್ ಸಮೀಪದಲ್ಲಿ ಲಕ್ಷ್ಮಣ ತೀರ್ಥ ನದಿ ತುಂಬಿ ಹರಿಯುತ್ತಿದೆ. ನದಿ ಪಾತ್ರದಲ್ಲಿ ಬೆಳೆ ಹಾನಿಯಾಗಿದ್ದು, ಕೃಷಿ ಭೂಮಿ ಜಲಾವೃತಗೊಂಡಿದೆ.