ಕೊಡಗು : ಡೆತ್ ನೋಟ್ ಬರೆದಿಟ್ಟು ಬಿಜೆಪಿ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ದ ಕೊಡಗು ಜಿಲ್ಲಾ ಕಾಂಗ್ರೆಸ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಮೆರೆವಣಿಗೆ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು. ಗಾಂಧಿ ಮಂಟಪದಿಂದ ಜನರಲ್ ತಿಮ್ಮಯ್ಯ ವೃತ್ತವರೆಗೆ ಮೆರವಣಿಗೆ ನಡೆಸಲಾಯಿತು. ಬಿಜೆಪಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಾಪ್ ಸಿಂಹ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಧಿಕ್ಕಾರ ಕೂಗಿ ಬೆಂಕಿ ಹಚ್ಚಿ ಕಾಲಿನಲ್ಲಿ ತುಳಿದು ಆಕ್ರೋಶ ಹೊರಹಾಕಿದರು.

