Bengaluru 22°C
Ad

ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಮೃತ್ಯು

ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೋಲಾರ: ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಯುವತಿಯನ್ನು ನಂಬಿಗಾನಹಳ್ಳಿ ಗ್ರಾಮದ ನಿವಾಸಿ 22 ವರ್ಷದ ದೀಪ್ತಿ ಎಂದು ಗುರುತಿಸಲಾಗಿದೆ. ಕಿಡ್ನಿ ಸ್ಟೋನ್ ಕಾರಣ ಯುವತಿ ಬುಧವಾರ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರ ಚಿಕಿತ್ಸೆಯನ್ನು ಗುರುವಾರ ಮಾಡುವುದಾಗಿ ವೈದ್ಯರು ತಿಳಿಸಿದ್ದರು.

ಆದರೆ ವೈದ್ಯರು ಸಂಜೆ 5 ಗಂಟೆ ಸುಮಾರಿನಲ್ಲಿ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯ ವೈದ್ಯರ ವಿರುದ್ಧ ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವೈದ್ಯರ ನಿರ್ಲಕ್ಷ್ಯವೇ ಆಕೆಯ ಸಾವಿಗೆ ಕಾರಣ ಎಂದಿದ್ದಾರೆ. ಜೊತೆಗೆ ವೈದ್ಯರು ನೀಡಿದ್ದ ಅನಸ್ತೇಶಿಯಾ ಡೋಸ್ ಹೆಚ್ಚಾಗಿ ಮೃತಪಟ್ಟಿದ್ದಾಳೆಂದು ಪೋಷಕರು ಆರೋಪಿಸಿದ್ದಾರೆ. ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Ad
Ad
Nk Channel Final 21 09 2023