Ad

ಆನಂದ ಮಾರ್ಗ ಆಶ್ರಮದಲ್ಲಿ ಗುಂಪುಗಳ ನಡುವೆ ಗಲಾಟೆ : ಓರ್ವ ಸ್ವಾಮೀಜಿ ಕೊಲೆ

ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು. ಓರ್ವ ಸ್ವಾಮೀಜಿ ಕೊಲೆಯಾದ ಘಟನೆ ನಡೆದಿದೆ.

ಕೋಲಾರ: ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು. ಓರ್ವ ಸ್ವಾಮೀಜಿ ಕೊಲೆಯಾದ ಘಟನೆ ನಡೆದಿದೆ. ಈ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ನಡೆದಿದೆ. ‘ಆಚಾರ್ಯ ಚಿನ್ಮಯಾನಂದ’ (65) ಮೃತ ದುರ್ಧೈವಿ. ಇವರ ಕೊಲೆ ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Ad
300x250 2

ಕಳೆದ ಹಲವು ವರ್ಷಗಳಿಂದ ವಿವಾದ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಬೆಳಿಗ್ಗೆ ಕೋರ್ಟ್​ಗೆ ದಾಖಲೆ ಸಹಿತ ಹೋಗುವ ವೇಳೆ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಚಿನ್ಮಯಾನಂದ ಅವರನ್ನು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಿಸಿದೇ ಕೊನೆಯುಸಿರೆಳೆದಿದ್ದಾರೆ. ಇದೀಗ ಆರೋಪಿಗಳಾದ ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಅರುಣ್ ಎಂಬುವವರನ್ನ ಮಾಲೂರು ಪೊಲೀಸರು ಬಂಧಿಸಿದ್ದಾರೆ.

Ad
Ad
Nk Channel Final 21 09 2023
Ad