Ad

ಕ್ಯಾನ್ಸರ್​ ಕಾರಕ: ಕಲರ್ ಬಳಸಿ ತಯಾರಿಸಿದ ಸ್ವೀಟ್​ ವಶಕ್ಕೆ

ಇಂದು ಕೆಜಿಎಫ್​ ನಗರಸಭೆ ವ್ಯಾಪ್ತಿಯಲ್ಲಿ ಸ್ವೀಟ್​​ ಅಂಗಡಿಗಳ ಮೇಲೆ ನಗರಸಭೆ ಪೌರಾಯುಕ್ತ ಪವನ್​ ಕುಮಾರ್​ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

ಕೋಲಾರ: ಇಂದು ಕೆಜಿಎಫ್​ ನಗರಸಭೆ ವ್ಯಾಪ್ತಿಯಲ್ಲಿ ಸ್ವೀಟ್​​ ಅಂಗಡಿಗಳ ಮೇಲೆ ನಗರಸಭೆ ಪೌರಾಯುಕ್ತ ಪವನ್​ ಕುಮಾರ್​ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

Ad
300x250 2

ಈ ವೇಳೆ ಕ್ಯಾನ್ಸರ್​ ಕಾರಕ ಕಲರ್ ಬಳಸಿ ತಯಾರು ಮಾಡಿದ್ದ ಸ್ವೀಟ್​ ಹಾಗೂ ತಿಂಡಿಗಳನ್ನು ವಶಕ್ಕೆ ಪಡೆಯಲಾಯಿತು. ಜೊತೆಗೆ ಆಹಾರ ಸುರಕ್ಷತೆ ನಿಯಮ ಪಾಲಿಸದೆ ಸ್ವೀಟ್​ ತಯಾರು ಮಾಡುತ್ತಿದ್ದ ಅಂಗಡಿಗಳಿಗೆ ನೋಟೀಸ್​ ನೀಡಿ ದಂಡ ವಿಧಿಸಲಾಗಿದೆ.

ಇನ್ನು ಅಧಿಕಾರಿಗಳು, ಕಲರ್ ಬಳಸಿ ತಯಾರು ಮಾಡಿದ್ದ ಸ್ವೀಟ್​ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದು ಕಸದ ಲಾರಿಗೆ ತುಂಬಿಸಿದ್ದಾರೆ. ಇತ್ತೀಚೆಗಷ್ಟೇ ಕೋಲಾರದ ಕೆಜಿಎಫ್ ನಗರಸಭೆ ಅಧಿಕಾರಿಗಳು ಗೋಬಿ ಮಂಜೂರಿ, ಕಬಾಬ್‌ ಸೆಂಟರ್​ಗಳ ಮೇಲೆ‌ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.

ಈ ವೇಳೆ ಅವುಗಳಲ್ಲಿ ಬಳಸಲಾಗುತ್ತಿದ್ದ ಬಣ್ಣದ ಐಟಂಗಳನ್ನು ಬ್ಯಾನ್ ಮಾಡಿದ್ದರು. ಜೊತೆಗೆ ಕಲರ್‌‌ ಬಳಸುವ ಎಲ್ಲಾ ಗೋಬಿ ಮಂಚೂರಿ, ಕಬಾಬ್ ಸೆಂಟರ್​ಗಳಿಗೆ ಭೇಟಿ ನೀಡಿ ಸರ್ಕಾರದ ಆದೇಶದಂತೆ ನಿಷೇಧಿತ ಕಲರ್ ಬಳಸದಂತೆ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಸ್ವೀಟ್​​ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.

Ad
Ad
Nk Channel Final 21 09 2023
Ad