ಕೋಲಾರ: ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ತಾಯಿ, ಮಗು ಸಾವನ್ನಪ್ಪಿರೋ ಘಟನೆ ಕೋಲಾರ ತಾಲೂಕಿನ ಹೊಗರಿಗೊಲ್ಲಹಳ್ಳಿಯಲ್ಲಿ ನಡೆದಿದೆ.

ಜಾನುವಾರುಗಳಿಗೆ ಮೇವು ತರಲು ಹೋಗಿದ್ದ ವೇಳೆ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮಾಲಾ (30) ಹಾಗೂ ಮಗು ಚಕ್ರವರ್ತಿ (06) ಮೃತಾಪಟ್ಟಿದ್ದಾರೆ.

ಕಾಲುಜಾರಿ ಕೃಷಿ ಹೊಂಡದಲ್ಲಿ ಬಿದ್ದಿದ್ದ ಮಗನನ್ನು ರಕ್ಷಿಸಲು ಹೋಗಿ ಮಾಲಾ ಕೂಡ ಜೀವ ಬಿಟ್ಟಿದ್ದಾರೆ., ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.