ಕೋಲಾರ : ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದು,, ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ವಧು ಮೃತಪಟ್ಟಿದ್ದರೆ, ವರನ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ. ವಧು ಲಿಖಿತ ಶ್ರೀ ಹಾಗೂ ನವೀನ್ ಇಂದು (ಆಗಸ್ಟ್ 07) ಸಪ್ತಪದಿ ತುಳಿದಿದ್ದಾರೆ.ಸ್ವಲ್ಪ ಹೊತ್ತಿನ ಬಳಿಕ ರೂಮ್ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತ ಶ್ರೀ ಸಾವನ್ನಪ್ಪಿದ್ದಾಳೆ.
ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ದುರದೃಷ್ಟವಶಾತ್ ವಧು ಲಿಖಿತ ಶ್ರೀ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇನ್ನು ಗಂಭೀತವಾಗಿ ಗಾಯಗೊಂಡಿರುವ ವರ ನವೀನ್ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನಿಸಲಾಗಿದೆ.
Ad