Bengaluru 27°C
Ad

ಈದ್​ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್​ ಬಾವುಟ : ಪ್ರಕರಣ ದಾಖಲು

ಸೋಮವಾರ ನಡೆದ ಈದ್ ಮಿಲಾದ್   ಮೆರವಣಿಗೆ ವೇಳೆ ನಡೆದ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಕೋಲಾರ  ನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಅಂಜುಮನ್ ಸಂಸ್ಥೆ ಬಳಿ ಫ್ರೀ ಪ್ಯಾಲೆಸ್ಟೈನ್ ಧ್ವಜ ಹಾರಾಟ ಮತ್ತು ಕ್ಲಾಕ್ ಟವರ್​ ಬಳಿ ಮೆರವಣಿಗೆ ಬಂದಾಗ ನಡೆದ ಗುಂಪು ಘರ್ಷಣೆ ವಿಚಾರವಾಗಿ ಪ್ರಕರಣ ದಾಖಲಾಗಿವೆ. ಗಲಾಟೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕೋಲಾರ‌ದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಕೋಲಾರ: ಸೋಮವಾರ ನಡೆದ ಈದ್ ಮಿಲಾದ್   ಮೆರವಣಿಗೆ ವೇಳೆ ನಡೆದ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಕೋಲಾರ  ನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಅಂಜುಮನ್ ಸಂಸ್ಥೆ ಬಳಿ ಫ್ರೀ ಪ್ಯಾಲೆಸ್ಟೈನ್ ಧ್ವಜ ಹಾರಾಟ ಮತ್ತು ಕ್ಲಾಕ್ ಟವರ್​ ಬಳಿ ಮೆರವಣಿಗೆ ಬಂದಾಗ ನಡೆದ ಗುಂಪು ಘರ್ಷಣೆ ವಿಚಾರವಾಗಿ ಪ್ರಕರಣ ದಾಖಲಾಗಿವೆ. ಗಲಾಟೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕೋಲಾರ‌ದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಈದ್‌ ಮಿಲಾದ್ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮರಿ ನಡೆದಿತ್ತು. ಕೋಲಾರದ ಕ್ಲಾಕ್‌ ಟವರ್‌ ಬಳಿ ಮೆರವಣಿಗೆ ಸಾಗುವಾಗ ಏಕಾಏಕಿ‌ ಮಾರಕಾಸ್ತ್ರ ಹಿಡಿದು ಬಂದ ಒಂದು ಗುಂಪು ಹಲ್ಲೆ‌ ಮಾಡಿತ್ತು.

ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ನಿಖಿಲ್‌ ಸ್ಥಳಕ್ಕೆ ಧಾವಿಸಿದ್ದು, ಗುಂಪುಗೂಡಿದ್ದ ಜನರನ್ನು ಚದುರಿಸಿದ್ದರು. ಬಳಿಕ ಮೆರವಣಿಗೆ ಮುಂದೆ ಸಾಗಿತ್ತು. ನಗರದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.

Ad
Ad
Nk Channel Final 21 09 2023