Bengaluru 24°C
Ad

ಸೇನಾ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ: ತುರ್ತು ಭೂಸ್ಪರ್ಶ

ಭಾರತೀಯ ವಾಯಸೇನೆಗೆ ಸೇರಿದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೊಡ್ಡೂರು ಕರಪನಹಳ್ಳಿಯ ಕೆರೆಯಲ್ಲಿ ತುರ್ತು ಭೂಸ್ಪರ್ಶವಾಗಿದೆ.

ಕೋಲಾರ: ಭಾರತೀಯ ವಾಯಸೇನೆಗೆ ಸೇರಿದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೊಡ್ಡೂರು ಕರಪನಹಳ್ಳಿಯ ಕೆರೆಯಲ್ಲಿ ತುರ್ತು ಭೂಸ್ಪರ್ಶವಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೂವರು ವಾಯುಸೇನೆಯ ಪೈಲಟ್‌ಗಳು ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ. ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದ ಹಿನ್ನೆಲೆಯಲ್ಲಿ ಒರ್ವ ಮಹಿಳಾ ಪೈಲಟ್ ಸೇರಿದಂತೆ ಮೂವರು ಸೇಫ್‌ ಆಗಿದ್ದಾರೆ.

ವಾಯು ಪಡೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಬೆಂಗಳೂರಿನ ಯಲಹಂಕ ಏರ್‌ ಇಂಡಿಯಾಗೆ ಸೇರಿದ ಈ ಹೆಲಿಕಾಪ್ಟರ್‌ ತರಬೇತಿ ನಿಮಿತ್ತ ಕೋಲಾರದ ಕೆಜಿಎಫ್ ಹಾಗೂ ಬಂಗಾರಪೇಟೆ ಸುತ್ತಮುತ್ತ ಹಾರಾಟ ನಡೆಸುತಿತ್ತು ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

ಯಲಹಂಕ ತಂತ್ರಜ್ಞರ ತಂಡ ಬಂದ ಬಳಿಕ ತಾಂತ್ರಿಕ ದೋಷ ಸರಿಪಡಿಸಲಿದ್ದಾರೆ. ಬಳಿಕ ಇಲ್ಲಿಂದ ಹೆಲಿಕಾಪ್ಟರ್ ವಾಪಸ್ ಆಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸೇನಾ ಹೆಲಿಕಾಪ್ಟರ್ ಆಗಿರುವುದರಿಂದ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

Ad
Ad
Nk Channel Final 21 09 2023