ಕೊಪ್ಪಳ : ಗಣೇಶ ಚತುರ್ಥಿಯ ಪ್ರಯುಕ್ತ ಗ್ರಾಮಕ್ಕೆ ಟ್ರ್ಯಾಕ್ಟರ್ ಮೂಲಕ ಗಣಪನ ಮೂರ್ತಿ ಸಾಗಿಸುತ್ತಿದ್ದ ವೇಳೆ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಜನ ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕೊಪ್ಪಳ ನಗರದಿಂದ ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮಕ್ಕೆ ಹೋಗುವಾಗ ತಾಲೂಕಿನ ಕೋಳೂರು ಕ್ರಾಸ್ ಬಳಿ ಈ ಘಟನೆ ಸಂಭವಿಸಿದ್ದು, ನಾಲ್ವರು ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಲಾರಿ ಬಂದು ಗುದ್ದಿದ ಪರಿಣಾಮ ಗಣೇಶನ ಮೂರ್ತಿ ನೆಲಕ್ಕುರುಳಿದ್ದು, ಈ ಪ್ರಕರಣದ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

