ಕೊಪ್ಪಳ: ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯನ್ನು ವಾಪಸ್ ಕಸಿದುಕೊಂಡು ವಂಚನೆ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಇಬ್ಬರನ್ನೂ ಅಮಾನತುಗೊಳಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ಗೋಲ್ಮಾಲ್ ನಡೆದಿದೆ.
ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಲೆತಗ್ಗಿಸುವಂತ ಕೆಲಸ ಮಾಡಿದ್ದಾರೆ. ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ, ಮಕ್ಕಳು ಬಾಯಿಗಿಡುವ ಮುನ್ನವೇ ಮೊಟ್ಟೆ ಕಸಿದುಕೊಂಡಿದ್ದಾರೆ. ಸ್ಥಳೀಯರು ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

