ಕೊಪ್ಪಳ: ರಾಷ್ಟ್ರಧ್ವಜದ ಮೇಲಿದ್ದ ಅಶೋಕ ಚಕ್ರದ ಬದಲಿಗೆ ಅರೇಬಿಕ್ ಅಕ್ಷರಗಳನ್ನು ಹಾಕಿ ಧ್ವಜ ಹಾರಿಸಿದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಕೊಪ್ಪಳ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಯಲಬುರ್ಗಾ ಪಟ್ಟಣದ ಮಹ್ಮದ್ ದಾನೀಶ್ ಕುತುಬುದ್ಧೀನ್ ಖಾಜಿ ಹಾಗೂ ಅವರ ಸಹೋದರ ಮಹ್ಮದ್ ಆದಿನಾನ್ ಖಾಜಿ ಬಂಧಿತ ಯುವಕರು.
ಈದ್ ಮಿಲಾದ್ ಆಚರಣೆ ವೇಳೆ ಬಟ್ಟೆಯಿಂದ ತ್ರಿವರ್ಣ ಧ್ವಜ ಹೊಲಿದು ಬಿಳಿಬಣ್ಣದ ಜಾಗದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್ ಅಕ್ಷರದಲ್ಲಿ ‘ಲಾ ಇಲ್ಲಾಹ ಇಲ್ಲಾಲ್ಲಾ ಮೊಹಮದ್ ರಸೂಲಲ್ಲಾ’ ಎಂದು ಬರೆಯಲಾಗಿತ್ತು. ಧ್ವಜವನ್ನು ವಿರೂಪಗೊಳಿಸಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
Ad