Bengaluru 22°C
Ad

ನ್ಯಾಯಾಲಯದಲ್ಲಿ ಕೆಲಸ ಕೊಡಿಸೋದಾಗಿ ಲಕ್ಷಾಂತರ ರೂ. ವಂಚನೆ!

ನ್ಯಾಯಾಲಯದಲ್ಲಿ ಕೆಲಸ ಕೊಡಿಸೋದಾಗಿ ಹಲವಾರು ಜನರಿಗೆ ಲಕ್ಷಾಂತರ ರೂ. ಹಣ ವಂಚಿಸಿರುವ ಪ್ರಕರಣ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ: ನ್ಯಾಯಾಲಯದಲ್ಲಿ ಕೆಲಸ ಕೊಡಿಸೋದಾಗಿ ಹಲವಾರು ಜನರಿಗೆ ಲಕ್ಷಾಂತರ ರೂ. ಹಣ ವಂಚಿಸಿರುವ ಪ್ರಕರಣ ಕೊಪ್ಪಳದಲ್ಲಿ ನಡೆದಿದೆ.

ಸಿದ್ದಲಿಂಗಯ್ಯ ಹಿರೇಮಠ ಎಂಬವನ ವಿರುದ್ಧ ವಂಚನೆ ಆರೋಪ ಮಾಡಲಾಗಿದೆ. ನ್ಯಾಯಾಲಯದಲ್ಲಿ ಪ್ರೋಸೆಸ್ ಸರ್ವರ್, ಜವಾನ ಹುದ್ದೆ ಖಾಲಿ ಇದೆ ಎಂದು ಜನರಿಗೆ ನಂಬಿಸುತ್ತಿದ್ದ. ಅಲ್ಲದೇ ಉದ್ಯೋಗ ಕೊಡಿಸುತ್ತೇನೆ ಎಂದು ಪ್ರತಿಯೊಬ್ಬರ ಬಳಿ 7 ಲಕ್ಷ ರೂ. ಹಣ ವಸೂಲಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಹಣ ಪಡೆದವರಿಗೆ ನಕಲಿ ನೇಮಕಾತಿ ಪತ್ರ ಕೊಟ್ಟಿದ್ದಾನೆ. ಅಲ್ಲದೇ ನೇಮಕಾತಿ ಪತ್ರದಲ್ಲಿ ನ್ಯಾಯಮೂರ್ತಿಗಳ ಸಹಿಯನ್ನು ನಕಲಿ ಮಾಡಿದ್ದಾನೆ. ರಾಜ್ಯದ ಹಲವೆಡೆ ಇಂತಹ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬೆಂಗಳೂರು ಮೂಲದ ಅಬ್ದುಲ್ ರಜಾಕ್ ಎಂಬವರು ಸಿದ್ದಲಿಂಗಯ್ಯ ವಿರುದ್ಧ ಸಿಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Ad
Ad
Nk Channel Final 21 09 2023