ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ, ಒಟ್ಟು ಆರು ಸಾರಿಗೆ ಸಂಘಟನೆಗಳು ಜತೆಗೂಡಿ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿವೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಸಾರಿಗೆ ಮುಷ್ಕರಕ್ಕೆ ಸಿದ್ಧರಾಗಲು ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಕರೆ ನೀಡಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ತಿಂಗಳ 26 ರ ವರೆಗೆ ಗಡುವು ನೀಡಲಾಗಿದೆ. ಈ ತಿಂಗಳ 26 ರೊಳಗೆ ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ, 27 ರಂದು ಸಭೆ ನಡೆಸಿ ಮುಷ್ಕರದ ದಿನಾಂಕ ಘೋಷಣೆ ಮಾಡುವ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾತಾನಾಡಿದ ಅನಂತ ಸುಬ್ಬರಾವ್, 27 ರಂದು ಸಭೆ ಮಾಡಿ ಮುಷ್ಕರ ದಿನಾಂಕ ಘೋಷಣೆ ಮಾಡುತ್ತೇವೆ ಎಂದಿದ್ದಾರೆ. ಈ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳಲ್ಲಿ ಒಟ್ಟು 23,978 ಬಸ್ಸುಗಳಿದ್ದು, ಇವುಗಳಲ್ಲಿ 1,04,450 ನೌಕರರಿದ್ದಾರೆ.