ಎರಡೂ ಕಣ್ಣು ಕಾಣದೆ ಅಲೆದಾಡುತ್ತಿದ್ದ ಬೃಹತ್ ಕಾಟಿವೊಂದನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟ ಅರಣ್ಯ ಸಿಬ್ಬಂದಿ

ಚಿಕ್ಕಮಗಳೂರು: ಆಲ್ದೂರು ವಲಯದ ಸತ್ತಿಹಳ್ಳಿ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಎರಡೂ ಕಣ್ಣು ಕಾಣದೆ ಅಲೆದಾಡುತ್ತಿದ್ದ ಬೃಹತ್ ಕಾಟಿ (ಕಾಡು ಕೋಣ) ವೊಂದನ್ನು ಅರಣ್ಯ ಸಿಬ್ಬಂದಿ ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಕಾಡುಕೋಣ ಯಾರಿಗೂ ತೊಂದರೆ ಕೊಡದಿದ್ದರೂ, ಕಣ್ಣು ಕಾಣದೆ ಯಾತನೆ ಅನುಭವಿಸುತ್ತಿತ್ತು. ಈ ಬಗ್ಗೆ ಸ್ಥಳೀಯ ಬೆಳೆಗಾರರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯ ವನ್ಯಜೀವಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳ ಅನುಮತಿ ಪಡೆದು ಶಿವಮೊಗ್ಗ ಸಿಂಹ ಧಾಮದ ನುರಿತ ವನ್ಯಜೀವಿ ವೈದ್ಯ ಸುಜಿತ್ ಹಾಗೂ ಭದ್ರಾ ವನ್ಯಜೀವಿ ವೈದ್ಯ ಯಶಸ್ ಒಡೆಯರ್ ತಂಡ ಕಾರ್ಯಾಚರಣೆ ನೆಡೆಸಿ ಅರವಳಿಕೆ ಮದ್ದು ನೀಡಿ ಕಾಡುಕೋಣ ರಕ್ಷಣೆ ಮಾಡಿದರು. ಅದನ್ನು ಮತ್ತೆ ಮರಳಿ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು.

ಈ ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ರಾಂತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಳಾದ ಮುದ್ದಣ,ರಾಜೇಶ್ ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್, ಗೌರವ ವನ್ಯಜೀವಿ ಪರಿಪಾಲಕ ವೀರೇಶ್, ಸಿಬ್ಬಂದಿಗಳಾದ ಗೌತಮ್, ನವೀನ್, ದರ್ಶನ್, ಮಂಜುನಾಥ್ ಇದ್ದರು.

Sneha Gowda

Recent Posts

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

4 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

7 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

22 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

28 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

54 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

56 mins ago