ದತ್ತಪೀಠದ ಸುತ್ತಮುತ್ತ ಇರುವ ಅನಧಿಕೃತ ಗೋರಿ ಸ್ಥಳಾಂತರಕ್ಕೆ ಒತ್ತಾಯ

ಚಿಕ್ಕಮಗಳೂರು: ದತ್ತಪೀಠದ ಸುತ್ತಮುತ್ತ ಇರುವ ಅನಧಿಕೃತ ಗೋರಿಗಳನ್ನು ಸ್ಥಳಾಂತರ ಮಾಡುವಂತೆ ಜಿಲ್ಲಾ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಪಕ್ಷದ ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್ ತಿಳಿಸಿದ್ದಾರೆ.

ದತ್ತಪೀಠದಲ್ಲಿ ಹಿಂದುಗಳೇ ಪೂಜೆ ಮಾಡಬೇಕು ಮತ್ತು ಅಲ್ಲಿನ ಗೋರಿಗಳನ್ನು ಪಕ್ಕದ ನಾಗೇನಹಳ್ಳಿಗೆ ಸ್ಥಳಾಂತರ ಮಾಡಬೇಕು ಎಂದು ಸಚಿವ ಸುನಿಲ್ ಕುಮಾರ್ ಆಗ್ರಹಿಸಿರುವುದು ಸ್ವಾಗತಾರ್ಹವಾಗಿದ್ದು, ಕಾಂಗ್ರೆಸ್ ಪಕ್ಷ ಇದನ್ನು ವಿರೋಧಿಸುವ ಮೂಲಕ ನಾವು ಎಂದಿಗೂ ಹಿಂದೂ ವಿರೋಧಿಗಳು ಎಂಬುದನ್ನು ಸಾಬೀತುಪಡಿಸುತ್ತಿದ್ದಾರೆ ಎಂದಿದ್ದಾರೆ.

ಆ ಪ್ರದೇಶದಲ್ಲಿ ಯಾವುದೇ ಅಧಿಕೃತವಾದ ಗೋರಿಗಳಿಲ್ಲವೆಂದು ಕಾಂಗ್ರೆಸ್ಸಿನವರಿಗೂ ಗೊತ್ತು ಹಾಗೂ ಒಂದು ಕೋಮಿನ ಮುಖಂಡರಿಗೂ ಆ ವಿಚಾರ ತಿಳಿದಿದೆ. ಆದರೂ ಅದರ ಬಗ್ಗೆ ಸುಳ್ಳು ದಾಖಲೆಯನ್ನು ಸೃಷ್ಠಿ ಮಾಡಿ ಕೋರ್ಟ್ ಮೆಟ್ಟಿಲೇರಿತ್ತು. ಯಾವುದಾದರೂ ದಾಖಲೆಗಳಿದ್ದರೆ ಅದು ದತ್ತಪೀಠದ ಹೆಸರಿನಲ್ಲಿ ಮಾತ್ರ ಎಂದು ಹೇಳಿದ್ದಾರೆ.

ಎಲ್ಲಾ ಕಂದಾಯ ಮತ್ತು ಸರ್ಕಾರಿ ದಾಖಲೆಗಳ ಪ್ರಕಾರ ಇನಾಂ ದತ್ತಾತ್ರೇಯ ಪೀಠ ಎಂದೇ ಇದ್ದು ಪಕ್ಕದ ನಾಗೇನಹಳ್ಳಿಯ ಸರ್ವೇ ನಂಬರ್ ೫೭ರಲ್ಲಿ ಬಾಬಾಬುಡನ್ ದರ್ಗಾ ಇರುವುದು ಎಲ್ಲಾ ನ್ಯಾಯಾಲಯಗಳಲ್ಲೂ ಈಗಾಗಲೇ ಸಾಬೀತಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಚಿಸಿದ್ದ ನಾಗಮೋಹನ್ ದಾಸ್ ನೇತೃತ್ವದ ಹಿಂದೂ ವಿರೋಧಿ ಸಮಿತಿ ನೀಡಿದ್ದ ವರದಿಯಂತೆ ಮುಜಾವರ್ ನೇಮಕವನ್ನು ಹೈಕೋರ್ಟ್ ಈಗ ರದ್ದುಗೊಳಿಸಿ ಹಿಂದೂ ಅರ್ಚಕರನ್ನು ನಿತ್ಯ ಪೂಜೆಗೆ ನೇಮಿಸಬೇಕೆಂದು ಆದೇಶಿಸಿದೆ ಅಲ್ಲದೇ ಮುಸ್ಲಿಂ ವ್ಯಕ್ತಿಯಿಂದ ಮೂರ್ತಿ ಪೂಜೆ ಮಾಡಿಸುವುದು ಅವರ ಧರ್ಮದ ಆಚರಣೆಯನ್ನು ಉಲ್ಲಂಘನೆ ಮಾಡಿದಂತೆ ಎಂದು ತಿಳಿಸಿದ್ದಾರೆ.

ಈ ಎಲ್ಲಾ ಕಾರಣದಿಂದ ಸಚಿವ ಸುನಿಲ್ ಕುಮಾರ್ ಇಲ್ಲಿರುವ ಗೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರಿಸಬೇಕೆಂದು ಆಗ್ರಹಿಸಿದ್ದಾರೆ. ದತ್ತಾತ್ರೇಯ ಮತ್ತು ಅನಸೂಯ ದೇವಿಗೆ ಪೀಠದ ಸ್ಥಳದಲ್ಲಿ ಮಾಂಸಹಾರದ ಮೂಲಕ ಅಪಮಾನ ಮಾಡಿದ್ದು ಸಾಕು. ಕಾಂಗ್ರೆಸಿಗರು ದತ್ತಪೀಠದ ವಿರುದ್ಧ ಹೇಳಿಕೆ ಕೊಡಿಸುತ್ತ ಜಿಲ್ಲೆಯಲ್ಲಿ ಮತ್ತೆ ಶಾಂತಿ ಕದಡಲು ಯತ್ನಿಸುತ್ತಿರುವುದು ನಾಚಿಕೆಗೇಡು, ಇತಿಹಾಸದ ಪಾವಿತ್ರತೆ ಕಾಪಾಡಲು ಹಿಂದುಗಳಿಗೆ ಸಂಪೂರ್ಣ ಪೀಠವನ್ನು ಹಸ್ತಾಂತರಿಸಲು ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳು ಸಹಕರಿಸಬೇಕೆಂದು ಆಗ್ರಹಿಸಿದ್ದಾರೆ.

Sneha Gowda

Recent Posts

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

4 mins ago

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

10 mins ago

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

22 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

60 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

1 hour ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

1 hour ago