ಚಿಕಮಗಳೂರು

ನರೇಂದ್ರ ಮೋದಿ ಅಭಿವೃದ್ಧಿ ವಿಚಾರದಲ್ಲಿ ಯಾರಿಗೂ ತಾರತಮ್ಯ ಮಾಡುವುದಿಲ್ಲ: ಸಿ.ಟಿ.ರವಿ

ಚಿಕ್ಕಮಗಳೂರು: ತಮಿಳುನಾಡಿಗೆ ಮೆಡಿಕಲ್ ಕಾಲೇಜು ಕೊಟ್ಟಿರುವುದನ್ನು ಟೀಕಿಸುವವರು ಮಹಾನ್ ಮೂರ್ಖರು, ಕರ್ನಾಟಕಕ್ಕೂ ಮೆಡಿಕಲ್ ಕಾಲೇಜು ಕೊಟ್ಟಿದ್ದಾರೆ. ಇಡೀ ದೇಶಕ್ಕೂ ಕೊಟ್ಟಿದ್ದಾರೆ. ತಮಿಳುನಾಡಿಗೆ ಹೋಗಿ ಮೋದಿ ಏನೂ ಕೊಟ್ಟಿಲ್ಲ ಎಂದು ಇದೇ ಜನ ಮಾತನಾಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಯಾವ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಇಲ್ಲ. ಆ ಎಲ್ಲಾ ಜಿಲ್ಲೆಗಳಲ್ಲಿ ಕಾಲೇಜು ನಿರ್ಮಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಜಾಗ ಕೊಟ್ಟು ಬೇಗ ಪ್ರಸ್ತಾವನೆ ಸಲ್ಲಿಸಿದವರಿಗೆ ಬೇಗ ಮೆಡಿಕಲ್ ಕಾಲೇಜು ಸಿಕ್ಕಿದೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಯಾದಗಿರಿ, ಹಾವೇರಿ, ಸೇರಿ ೫ ಮೆಡಿಕಲ್ ಕಾಲೇಜುಗಳನ್ನು ನಮ್ಮ ರಾಜ್ಯಕ್ಕೆ ಕೊಡಲಾಗಿದೆ. ಅವೆಲ್ಲವೂ ರಾಜ್ಯ ಮತ್ತು ಕೇಂದ್ರದ ಸಹಯೋದಗಲ್ಲೇ ಮಂಜೂರಾಗಿವೆ ಎಂದರು.

೫೦ ವರ್ಷ ಕಾಂಗ್ರೆಸ್ ಕೊಟ್ಟಿದ್ದನ್ನು ಕೇವಲ ೭ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ರೈಲ್ವೇ, ರಾಷ್ಟ್ರೀಯ ಹೆದ್ದಾರಿ, ಏರ್‌ಪೋರ್ಟ್ ಎಲ್ಲವೂ ಬಂದಿವೆ. ತಮಿಳುನಾಡು, ಕೇರಳದಲ್ಲಿ ಒಂದೂ ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆದ್ದಿಲ್ಲ. ಆದರೆ ನರೇಂದ್ರ ಮೋದಿ ಅವರು ಅಭಿವೃದ್ಧಿ ವಿಚಾರದಲ್ಲಿ ಯಾರಿಗೂ ತಾರತಮ್ಯ ಮಾಡುವುದಿಲ್ಲ. ತಾರತಮ್ಯದ ರಾಜಕಾರಣ ಮಾಡುವುದು ಕಾಂಗ್ರೆಸ್ ಸಂಸ್ಕೃತಿ, ಅಭಿವೃದ್ಧಿ ದೃಷ್ಠಿಯಿಂದ ದೇಶದ ಎಲ್ಲಾ ಜನರನ್ನು ಒಂದೇ ಸಮನಾಗಿ ನೋಡುವುದು ಬಿಜೆಪಿ ಮತ್ತು ನರೇಂದ್ರ ಮೋದಿ ಮಾತ್ರ ಎಂದರು.

Sneha Gowda

Recent Posts

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

6 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

43 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago