ಪರಿಸರವಾದಿ ಡಿ ವಿ ಗಿರೀಶ್ ಮೇಲೆ ಹಲ್ಲೆ ಪ್ರಕರಣ: 7 ಮಂದಿ ಬಂಧನ

ಚಿಕ್ಕಮಗಳೂರು: ಪರಿಸರವಾದಿ ಡಿ. ವಿ. ಗಿರೀಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಂಬಿ ಹಳ್ಳಿ ಗ್ರಾಮದಲ್ಲಿ ಗಿರೀಶ್ ಮೇಲೆ ಹಲ್ಲೆ ನಡೆಸಲಾಗಿತ್ತು. ಆಗಸ್ಟ್ 30 ರಂದು ಡಿ. ವಿ. ಗಿರೀಶ್ ಮತ್ತು ತಂಡದ ಮೇಲೆ ಹಲ್ಲೆ ನಡೆಸಿದ್ದರು.

ಕಿಡಿಗೇಡಿಗಳು ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ 3 ತಂಡಗಳನ್ನು ರಚನೆ ಮಾಡಿದ್ದರು. ಆರೋಪಿಗಳನ್ನು ಪತ್ತೆ ಮಾಡಿದ ಪೊಲೀಸರು ಇದೀಗ ಬಂಧಿಸಿದ್ದಾರೆ. ಈಮಾಹಿತಿಯನ್ನು ಚಿಕ್ಕಮಗಳೂರು ಎಸ್ ಪಿ ಟ್ವೀಟ್ ಮಾಡಿದ್ದಾರೆ.

ಆರೋಪಿಗಳೆಲ್ಲರೂ ಶಾಂತವೇರಿ, ಕಂಬಿ ಹಳ್ಳಿ, ಹಾಗೂ ಹೊಸಪೇಟೆ ನಿವಾಸಿಗಳಾಗಿದ್ದಾರೆ. ಕೇವಲ 48 ಗಂಟೆಗಳಲ್ಲಿ ಈ ಮೂರು ತಂಡದ ಸಿಬ್ಬಂದಿ, ಏಳು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳು ಮಡಿಕೇರಿ, ಹಾಸನ ಹಾಗೂ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆ ಕಾರ್ಯವನ್ನು ಆದಷ್ಟು ಬೇಗ ಮಾಡಿದ ಎಲ್ಲಾ ಸಿಬ್ಬಂದಿಗೆ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನೆ ಸಲ್ಲಿಸಿದ್ದಾರೆ ಹಾಗೂ ನಗದು ಬಹುಮಾನವನ್ನು ಸಹ ಘೋಷಣೆ ಮಾಡಿದ್ದಾರೆ.

Sneha Gowda

Recent Posts

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

11 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

17 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

21 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

36 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

41 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

1 hour ago