ಶ್ರೀಗಂಧದ ಮರಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯ ಬಂಧನ

ಚಿಕ್ಕಮಗಳೂರು: ಶ್ರೀಗಂಧದ ಮರಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯ ಸಿಬ್ಬಂದಿ ಬಂಧಿಸಿ 20 ಕೆ.ಜಿ.ಯಷ್ಟು ಗಂಧವನ್ನು ವಶಪಡಿಸಿಕೊಂಡಿದ್ದಾರೆ. 3 ಮಂದಿ ತಪ್ಪಿಸಿಕೊಂಡಿದ್ದಾರೆ.

ತಾಲೂಕಿನ ಕಮೇನಹಳ್ಳಿ ಅರಣ್ಯ ಪ್ರದೇಶದಲ್ಲಿ ರಾತ್ರಿ ಬೀಡು ಬಿಟ್ಟಿದ್ದ ಸಿಬ್ಬಂಧಿ ಶ್ರೀಗಂಧ ಮರಗಳ ಕಡಿದು ಗಂಧ ತೆಗೆಯುವ ವೇಳೆ ಕಾರ್ಯಾಚರಣೆ ನಡೆಸಿದ್ದು, ತಮಿಳುನಾಡು ಮೂಲದ ರಮೇಶ ಎಂಬಾತನನ್ನು ಬಂಧಿಸಿದ್ದಾರೆ.

ಇನ್ನೂ 3 ಜನ ಶ್ರೀಗಂಧ ಚೋರರು ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದಾರೆ. ತಮಿಳುನಾಡು, ಆಂಧ್ರ ಪ್ರದೇಶ ಮೂಲದ ಶ್ರೀಗಂಧ ಕಳ್ಳ ಸಾಗಣೆ ತಂಡವು ಚುರ್ಚೆ ಗುಡ್ಡ, ಕಾಮೇನಹಳ್ಳಿ ಅರಣ್ಯ ಪ್ರದೇಶದ ಶ್ರೀಗಂಧ ಮರಗಳ ಮೇಲೆ ಕಣ್ಣು ಹಾಕಿ ವ್ಯವಸ್ಥಿತ ಶ್ರೀಗಂಧ ಕಳ್ಳಸಾಗಣೆ ಯಲ್ಲಿ ತೊಡಗಿವೆ ಎಂದು ಹೇಳಲಾಗುತ್ತಿದೆ.

ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸ್ವಾತಿ, ಸಿಬ್ಬಂದಿಗಳಾದ ವಸಂತ, ನಂದೀಶ್, ಸುನಿಲ್, ಮೊಹಮ್ಮದ್ ಭಾಗವಹಿಸಿದ್ದರು.

Sneha Gowda

Recent Posts

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

13 mins ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

26 mins ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

1 hour ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

1 hour ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

2 hours ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

2 hours ago