ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾ|ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದ ಕುಟುಂಬ ಸಮಾರಂಭದಲ್ಲಿ ಮಾಂಸಾಹಾರಿ ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥಗೊಂಡಿದ್ದಾರೆ.ಸದ್ಯ ಅಸ್ವಸ್ಥರಾದವರು ಕಡೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾನುವಾರ ಮರವಂಜಿಯಲ್ಲಿ ಕಾರ್ಯಕ್ರಮವೊಂದು ನಡೆದಿತ್ತು.ಸಮಾರಂಭದಲ್ಲಿ ಬಿರಿಯಾನಿ ಸೇವಿಸಿದವರಿಗೆ ಸೋಮವಾರ ಭೇದಿ, ವಾಂತಿ ಕಾಣಿಸಿಕೊಂಡಿತ್ತು. ಕೂಡಲೇ ಗ್ರಾಮಸ್ಥರು ಅವರನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ್ದಾರೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಇನ್ನು ಶಾಸಕ ಕೆ ಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.