ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ವಶ

ಚಿಕ್ಕಮಗಳೂರು : ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಘಟನೆ ಜಿಲ್ಲೆಯ ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ. ೬ ಕೆಜಿ ೫೮೬ ಗ್ರಾಂ ಚಿನ್ನ, ೧ ಕೆಜಿ ೭೧.೪೯೨ ಗ್ರಾಂ ವಜ್ರಾಭರಣ, ೧ ಕೆಜಿ ಬೆಳ್ಳಿ ವಸ್ತುಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಂದ ಒಂದು ಕಾರು ಪೊಲೀಸರಿಗೆ ಅನುಮಾನ ಹುಟ್ಟಿಸಿದೆ. ಹೀಗಾಗಿ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಕೋಟ್ಯಂತರ ಮೌಲ್ಯದ ಚಿನ್ನಾ ಭರಣಗಳು ಪತ್ತೆಯಾಗಿವೆ. ಸಾಗಿಸಲಾಗುತ್ತಿದ್ದ ಚಿನ್ನ, ಬೆಳ್ಳಿ, ಡೈಮಂಡ್‌ಗಳ ದಾಖಲೆಗಳನ್ನು ಕೇಳಿದಾಗ ಸಂಬಂಧಪಟ್ಟವರು ದಾಖಲೆ ನೀಡಿಲ್ಲ. ಹೀಗಾಗಿ ಚಿನ್ನಾಭರಣಗಳನ್ನು ಪೊಲೀಸರು ಜಪ್ತಿ ಮಾಡಿ ಚಿನ್ನಾಭರಣದ ಮೂಲದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ಕೋಟ್ಯಂತರ ಮೌಲ್ಯದ ಚಿನ್ನ, ಡೈಮಂಡ್ಸ್ ಹಾಗೂ ಬೆಳ್ಳಿ ವಸ್ತುಗಳನ್ನು ಟ್ರಕ್ ಮೂಲಕ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಚುನಾವಣಾಧಿಕಾರಿಗಳು, ಪೊಲೀಸರು ಟ್ರಕ್ ತಡೆದು ಪರಿ ಶೀಲನೆ ನಡೆಸಿದಾಗ ಚಿನ್ನಾಭರಣಗಳನ್ನು ಸಾಗಿ ಸುತ್ತಿರುವ ವಿಚಾರ ತಿಳಿದು ಬಂದಿದೆ. ಪ್ರಾಥಮಿಕ ತನಿಖೆ ವೇಳೆ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿರುವುದು ತಿಳಿದುಬಂದ ಹಿನ್ನೆಲೆ ಅವುಗಳನ್ನು ವಶಕ್ಕೆ ಪಡೆದಿದ್ದಾರೆ.

Chaitra Kulal

Recent Posts

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

22 seconds ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

12 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

22 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

43 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

1 hour ago