ವಿಧಾನಸಭಾ ಚುನಾವಣೆ ಇ.ವಿ.ಎಂ ರ್‍ಯಾಂಡ್ಮಮೈಜೇಷನ್ ಆಯಾ ಮತಕ್ಷೇತ್ರಗಳಿಗೆ ರವಾನೆ

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ೨೦೨೩ ರ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗ ಸೂಚಿ ಪ್ರಕಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ವಿದ್ಯುನ್ಮಾನ ಮತ ಯಂತ್ರ(ಇವಿಎಂ)ಗಳ ಕಂಪ್ಯೂಟರ್ ಆಧಾರಿತ ಪ್ರಥಮ ರ್‍ಯಾಂಡ್ಮಮೈಜೇಷನ್ ಪ್ರಕ್ರಿಯೆ ನಡೆಸಲಾಯಿತು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂ ಗಣದಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ಪ್ರಥಮ ರ್‍ಯಾಂಡ್ಮಮೈಜೇಷನ್ ಪ್ರಕ್ರಿಯೆ ನಡೆಯಿತು.

ಜಿಲ್ಲೆಯ ೫ ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ೧೨೨೨ ಮತಗಟ್ಟೆಗಳಿವೆ. ಬ್ಯಾಲೆಟ್ ಯುನಿಟ್ ೧೪೬೯, ಕಂಟ್ರೋಲ್ ಯುನಿಟ್ ೧೪೬೯, ವಿವಿ ಪ್ಯಾಟ್ ೧೫೯೧ ಮತಯಂತ್ರಗಳನ್ನು ಪೂರೈಕೆ ಮಾಡಲಾಗುತ್ತದೆ.

ಮೊದಲ ಹಂತದ ಪರೀಶಿಲನೆ (ಎಫ್ ಎಲ್ ಸಿ) ಕಾರ್ಯ ಈಗಾಗಲೇ ಮುಗಿದಿದ್ದು, (ಅವುಗಳನ್ನು ರಾಜಕೀಯ ಪಕ್ಷಗಳ ಸಮ್ಮುಖದಲ್ಲಿ ಈಗಾಗಲೇ ಮೊದಲ ಹಂತದ ಪರಿಶೀಲನೆ(ಎಫ್ ಎಲ್ ಸಿ) ಮಾಡಲಾಗಿದೆ).

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರು ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮಕ್ಷಮದಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಪ್ರಥಮ ರ್‍ಯಾಂಡ್ಮಮೈಜೇಷನ್ ನಡೆಯುತ್ತದೆ ಎಂದು ತಿಳಿಸಿದರು. ಇದಾದ ಬಳಿಕ ಆಯಾ ಮತಕ್ಷೇತ್ರಗಳಿಗೆ ಮತಯಂತ್ರಗಳನ್ನು ಕಳುಹಿಸಲಾಗುತ್ತದೆ. ಆಯಾ ವಿಧಾನಸಭಾ ವ್ಯಾಪ್ತಿಯ ಸ್ಟ್ರಾಂಗ್ ರೂಂನಲ್ಲಿ ಮತಯಂತ್ರಗಳನ್ನು ಸಂಗ್ರಹಿ ಇಡಲಾಗುತ್ತದೆ ಎಂದು ಹೇಳಿದರು.

ಜಿಲ್ಲೆಯ ೫ ವಿಧಾನಸಭಾ ಮತಕ್ಷೇತ್ರ ಗಳಿಗೆ ಸಂಬಂಧಿಸಿದಂತೆ, ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್, ಹಾಗೂ ವಿವಿ ಪ್ಯಾಟ್ ಸೇರಿ ಒಟ್ಟಾರೆ ೪೫೨೯ ಸಾವಿರಕ್ಕೂ ಅಧಿಕ ಯಂತ್ರಗಳು ಇವೆ. ಇವುಗಳ ಪೈಕಿ ಯಾವ ಯಂತ್ರ ಯಾವ ಕ್ಷೇತ್ರಕ್ಕೆ ಹೋಗುತ್ತದೆ ಎಂಬುದು ಯಾರಿಗೂ ಗೊತ್ತಿರುವುದಿಲ್ಲ. ಪ್ರಥಮ ರ್‍ಯಾಂಡ್ಮಮೈಜೇಷನ್ ಬಳಿಕ ಯಾವ ಇವಿಎಂ ಯಾವ ಕ್ಷೇತ್ರಕ್ಕೆ ಹೋಗಲಿದೆ ಎಂಬುದು ಗೊತ್ತಾಗುತ್ತದೆ.

ಚುನಾವಣಾ ವೀಕ್ಷಕರ ಸಮ್ಮುಖ ದಲ್ಲಿ ೨ನೇ ರ್‍ಯಾಂಡ್ಮಮೈಜೇಷನ್:
೨ನೇ ಹಂತದ ರ್‍ಯಾಂಡ್ಮಮೈಜೇಷನ್ ಪ್ರಕ್ರಿಯೆಯು ಆಯಾ ಮತಕ್ಷೇತ್ರಗಳ ಚುನಾವಣಾ ವೀಕ್ಷಕರ ಉಪಸ್ಥಿತಿಯಲ್ಲಿ ನಡೆಯಲಿದೆ. ಇದಾದ ಬಳಿಕ ಯಾವ ಮತಯಂತ್ರ(ಇವಿಎಂ) ಯಾವ ಮತಗಟ್ಟೆಗೆ ಹೋಗುತ್ತದೆ ಎಂಬುದು ತಿಳಿಯುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಪ್ರಥಮ ರ್‍ಯಾಂಡ್ಮ ಮೈಜೇಷನ್ ಬಳಿಕ ಚಿಕ್ಕಮಗಳೂರು ನಗರದಲ್ಲಿರುವ ಚುನಾವಣಾ ಆಯೋಗದ ಉಗ್ರಾಣದ ಮೂಲಕ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಮತಯಂತ್ರ ಗಳನ್ನು ಬಿಗಿ ಬಂದೋಬಸ್ತ್ ಮೂಲಕ ಕಳುಹಿಸಲಾಗುತ್ತದೆ ಎಂದು ವಿವರಿಸಿ ಅವರು ಆಯಾ ಮತಕ್ಷೇತ್ರಗಳ ಸ್ಟ್ರಾಂಗ್ ರೂಂನಲ್ಲಿ ಮತಯಂತ್ರಗಳನ್ನು ಸಂಗ್ರಹಿಸಿ ಇಡಲಾಗುತ್ತದೆ ಎಂದು ಹೇಳಿದರು.

ಮತಯಂತ್ರಗಳ ರ್‍ಯಾಂಡ್ಮ ಮೈಜೇಷನ್, ಮರು ರ್‍ಯಾಂಡ್ಮ ಮೈಜೇಷನ್ ಹಾಗೂ ಕೊನೆಯಲ್ಲಿ ಅಂತಿಮ ರ್‍ಯಾಂಡ್ಮಮೈಜೇಷನ್ ಮಾಡುವ ಮೂಲಕ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ರ್‍ಯಾಂಡ್ಮಮೈಜೇಷನ್ ಪ್ರಕ್ರಿಯೆ ಕೈಗೊಂಡು ವಿಧಾನಸಭಾ ಮತಕ್ಷೇತ್ರವಾರು ಇವಿಎಂ ಹಂಚಿಕೆಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.

ಜಿ.ಪಂ. ಮುಖ್ಯಕಾರ್ಯನಿರ್ವಾ ಹಕಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಅಪರ ಜಿಲ್ಲಾಧಿಕಾರಿ ಬಿ.ಆರ್. ರೂಪ, ಎಲ್ಲಾ ೫ ವಿಧಾನಸಭಾ ಮತಕ್ಷೇತ್ರಗಳ ಚುನಾವಣಾಧಿಕಾರಿ ಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ರ್‍ಯಾಂಡ್ಮಮೈಜೇಷನ್ ಪ್ರಕ್ರಿಯೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Sneha Gowda

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

8 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

11 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

41 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

48 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

1 hour ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago