ಬಾಳೆಹೊನ್ನೂರು, ಅ.20: ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾಗಲು ಕಾರಣನಾದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಜುನಾಥ್ (20). 17 ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಮಂಜುನಾಥ್ 4 ವರ್ಷಗಳಿಂದ ಪ್ರೀತಿಸುತ್ತಿದ್ದನು. ಏಪ್ರಿಲ್ ತಿಂಗಳಲ್ಲಿ ಈ ಯುವಕ ಅಪ್ರಾಪ್ತೆಯನ್ನು ಭೇಟಿ ಮಾಡಿದ್ದು, ಮದುವೆ ಆಗುವುದಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ.
ಇತ್ತೀಚೆಗೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಅಪ್ರಾಪ್ತೆಯನ್ನು ವೈದ್ಯರ ಬಳಿ ತಪಾಸಣೆಗೆ ಕರೆತಂದು ತಪಾಸಣೆ ನಡೆಸಿದಾಗ ಆಕೆ ಗರ್ಭವತಿ ಆಗಿರುವುದು ಬೆಳಕಿಗೆ ಬಂದಿದೆ.
ಸಂತ್ರಸ್ತೆ ಈ ಬಗ್ಗೆ ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ.