ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.
ನವೆಂಬರ್ 4ರ ಬೆಳಗ್ಗೆ 6ರಿಂದ ನ.6ರ ಬೆಳಗ್ಗೆ 10ರವರೆಗೆ ಚಂದ್ರದ್ರೋಣ ಪವರ್ತ ಸಾಲಿನ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.
ಶ್ರೀರಾಮಸೇನೆ ಕಾರ್ಯಕರ್ತರಿಂದ ಅಕ್ಟೋಬರ್ 30ರಿಂದ ನವೆಂಬರ್5ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮತ್ತು ಎಸ್ಪಿ ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.