News Karnataka Kannada
Sunday, May 19 2024
ಚಿಕಮಗಳೂರು

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ ನಡೆದಿದೆ.
Photo Credit : NewsKarnataka

ಚಿಕ್ಕಮಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ ನಡೆದಿದೆ.

ಬೈಕ್‌ ಸವಾರರು ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ್ದಾರೆ. ಪರಿಣಾಮ ಬೈಕ್‌ನಿಂದ ಹಾರಿ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಪೆಟ್ಟಾಗಿದೆ.ಇದರಿಂದಾಗಿ ಹೊರನಾಡು ಗ್ರಾಮದ ಉಮೇಶ್, ಮುಂಡಗದ ಮನೆ ಗ್ರಾಮದ ಸುನಿಲ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೂಡಿಗೆರೆ ತಾಲೂಕಿನ ಮುಂಡಗದ ಮನೆ ಗ್ರಾಮದ ಉಮೇಶ್, ಸುನೀಲನನ್ನು ಶಿವಮೊಗ್ಗಕ್ಕೆ ಬಿಡಲು ಹೋಗುತ್ತಿದ್ದರು. ತಿರುವಿನಲ್ಲಿ ನಿಯಂತ್ರಣಕ್ಕೆ ಬೈಕ್ ನೇರ ವಿದ್ಯುತ್‌ ಕಂಬಕ್ಕೆ ಗುದ್ದಿದೆ. ಸ್ಥಳಕ್ಕೆ ಎನ್‌.ಆರ್ ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು