ತಂಗಡಗಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ಚಿಕ್ಕಮಗಳೂರು: ನಗರದಲ್ಲಿ ಕಳೆದ ಎರಡು ದಿನಗಳಿಂದ ಶಿವರಾಜ್‌ ತಂಗಡಗಿ ಹೇಳಿದ್ದ ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡೆಯಿರಿ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದು ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕಾರ್ಯಕರ್ತರ ಸಭೆ ನಡೆಸಲು ಮಾರ್ಚ್​ 26 ರಂದು ಕೆ.ಜೆ.ಜಾರ್ಜ್ ಮತ್ತು ಜಯಪ್ರಕಾಶ್ ಹೆಗ್ಡೆ ನಗರಕ್ಕೆ ಬಂದಿದ್ದರು. ಆದ್ರಿಕ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿ ನಡೆಯುತ್ತಿರುವ ಮಾಹಿತಿ ತಿಳಿದು, ಸ್ಥಳಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಮೋದಿ ಭಾವಚಿತ್ರ ಹಿಡಿದು ಕಾಂಗ್ರೆಸ್​ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದರು ಅಲ್ಲದೆ,ಮುತ್ತಿಗೆ ಹಾಕಲು ಯತ್ನಿಸಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಚುನಾವಣಾ ಅಧಿಕಾರಿಗಳು “ನೀತಿ ಸಂಹಿತೆ ಜಾರಿ ನಡುವೆಯೂ ಪ್ರತಿಭಟನೆ ನಡೆಸಿದ್ದಾರೆ” ಎಂದು ಚಿಕ್ಕಮಗಳೂರು ನಗರ ಪೊಲೀಸ್ ‌ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚುನಾವಣಾ ಅಧಿಕಾರಿಗಳ ದೂರಿನ ಆಧಾರದ ಮೇಲೆ 15ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

Nisarga K

Recent Posts

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

20 mins ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

37 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

1 hour ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

2 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

2 hours ago