News Karnataka Kannada
Monday, April 29 2024
ಚಿಕಮಗಳೂರು

ಪ್ರಧಾನಿ ಮೋದಿಗೆ ದೇಶದಲ್ಲೇ ಸಿಗದಂತಹ ಗಿಫ್ಟ್ ಕೊಟ್ಟ ಅಂಧ ಅಥ್ಲೀಟ್

Blind athlete gives PM Modi gift he can't get in the country
Photo Credit : Twitter

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ಸಮೀಪದ ಕುಗ್ರಾಮ ಗುಡ್ನಳ್ಳಿ ಗ್ರಾಮದ ಅಂಧ ಯುವತಿ ಹಾಗೂ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ರಕ್ಷಿತಾ ರಾಜು ಭಾರತದಲ್ಲೇ ಸಿಗದಂತಹಾ 5,500 ರೂ. ಮೌಲ್ಯದ ಅಪರೂಪದ ಉಡುಗೊರೆಯನ್ನು ಪ್ರಧಾನಿ ಮೋದಿಗೆ ನೀಡಿದ್ದಾರೆ.

ಅಂಧ ಯುವತಿಯಿಂದ ಉಡುಗೊರೆ ಸ್ವೀಕರಿಸಿದ ಪ್ರಧಾನಿ ಮೋದಿ ಖುಷಿ ಪಟ್ಟು ಪ್ಯಾರಾ ಒಲಿಂಪಿಕ್ಸ್‌ನಲ್ಲೂ ಚಿನ್ನ ಗೆಲ್ಲುವಂತೆ ಹಾರೈಸಿದ್ದಾರೆ. ಕೇಂದ್ರ ಸರ್ಕಾರ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಕ್ಷಿತಾ ರಾಜು ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಉಡುಗೊರೆ ನೀಡಿ ಖುಷಿಪಟ್ಟಿದ್ದಾರೆ. ಈ ಉಡುಗೊರೆ ಏನಪ್ಪ ಅಂದರೆ, ಅಂಧ ಕ್ರೀಡಾಪಟಗಳು ಓಡುವಾಗ ಹಾಕಿಕೊಳ್ಳುವ ಟಿಟ್ಟರ್.

ಅದು ಭಾರತದಲ್ಲಿ ಸಿಗುವುದಿಲ್ಲ. ಅದನ್ನು ರಕ್ಷಿತಾ ರಾಜು ಚೀನಾದಿಂದ ತಂದಿದ್ದರು. ಅದನ್ನು ಅಂತಾರಾಷ್ಟ್ರೀಯ ಪ್ಯಾರಾ ಒಲಿಂಪಿಕ್ ಸಮಿತಿ ಸರ್ಟಿಫೈ ಮಾಡಿರುತ್ತದೆ. ಅದೇ ಟಿಟ್ಟರ್ ಧರಿಸಿ ರಕ್ಷಿತಾ ರಾಜು 2018ರಲ್ಲೂ ಚಿನ್ನದ ಪದಕ ಗೆದ್ದಿದರು. ಈಗಲೂ ಚಿನ್ನದ ಪದಕ ಗೆದ್ದಿದ್ದಾರೆ. ಇದರ ಬೆಲೆ 5,500 ರೂ. ತಾನು ಓಡಿ 2 ಚಿನ್ನದ ಪದಕ ಗೆದ್ದ ಅಪರೂಪದ ಟಿಟ್ಟರ್ ಅನ್ನು ರಕ್ಷಿತಾ ರಾಜು ಪ್ರಧಾನಿ ಭೇಟಿ ವೇಳೆ ಮೋದಿಗೆ ನೀಡಿದ್ದಾರೆ.

ಟಿಟ್ಟರ್ ಅಂದ್ರೆ ಅದೊಂದು ಮಾದರಿ ಹಗ್ಗದಂತೆ. ಅಂಧ ಓಟಗಾರರಿಗೂ ಹಾಗೂ ಅವರ ಜೊತೆ ಓಡುವವರಿಗೂ ಈ ಟಿಟ್ಟರ್ ಸಹಾಯ ಮಾಡುತ್ತೆ. ಅಂಧರ ಜೊತೆ ಓಡುವವರು ತಮ್ಮ ಕೈಗೆ ಹಾಕಿಕೊಂಡು ಅವರು ಓಡುವಂತೆಯೇ ಇವರು ಓಡಬೇಕು. ಅವರನ್ನು ಮುಟ್ಟುವಂತಿಲ್ಲ. ಎಳೆದುಕೊಂಡು ಓಡುವಂತಿಲ್ಲ.

ಅಂಧರಿಗಿಂತ ಇವರೇ ಮೊದಲು ಓಡುವಂತಿಲ್ಲ. ಹೀಗೆ ಹತ್ತಾರು ನಿಯಮಗಳ ಮಧ್ಯೆ ಅಂಧ ಓಟಗಾರರು ಹಾಗೂ ಜೊತೆ ಓಟಗಾರರ ಮಧ್ಯೆ ಸಮಯೋಚಿತವಾಗಿ ಓಡಲು ಈ ಟಿಟ್ಟರ್ ಸಹಾಯ ಮಾಡುತ್ತೆ. ಅದನ್ನು ಅಂತಾರಾಷ್ಟ್ರೀಯ ಪ್ಯಾರಾ ಒಲಿಂಪಿಕ್ಸ್ ಸಮಿತಿ ಸರ್ಟಿಫೈ ಮಾಡಿರುತ್ತೆ. ಅದನ್ನೇ ಧರಿಸಬೇಕು. ಅಂಧ ಓಟಗಾರರ ಓಟಕ್ಕೆ ಈ ಟಿಟ್ಟರ್ ಇಲ್ಲ ಅಂದ್ರೆ ಅವರಿಗೆ ಓಡಲು ಅವಕಾಶ ನೀಡುವುದಿಲ್ಲ. ಅಂತಹಾ ಟಿಟ್ಟರ್ ಅನ್ನು ರಕ್ಷಿತಾ ರಾಜು ಪ್ರಧಾನಿ ಮೋದಿಗೆ ಉಡುಗೊರೆ ನೀಡಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು