News Karnataka Kannada
Tuesday, May 07 2024
ಚಿಕಮಗಳೂರು

ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್‌: ವಿದ್ಯಾರ್ಥಿನಿ ದುರಂತ ಅಂತ್ಯ

Ckm Breaking
Photo Credit : News Kannada

ಚಿಕ್ಕಮಗಳೂರು: ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಚಲಿಸಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದರು, ಅದರಲ್ಲಿ ಓರ್ವ ವಿದ್ಯಾರ್ಥಿ ಇದೀಗ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ಬಳಿ ನಡೆದಿದೆ.

ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ಏಕಾಏಕಿ ಮಕ್ಕಳ ಮೇಲೆ ಹರಿದಿದೆ. ಕೂದಲೆಳೆ ಅಂತರದಲ್ಲಿ ಐವರು ಮಕ್ಕಳು ಪಾರಾಗಿದ್ದರು, ಆದರೆ ತುಳಸಿ (15) ಹಾಗೂ ನಿವೇದಿತ (14) ಸ್ಥಿತಿ ಗಂಭೀರವಾಗಿ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾಳೆ.

ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತುಳಸಿ, ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ಮಂಜು-ಲತಾ ದಂಪತಿಯ ಪುತ್ರಿಯಾಗಿದ್ದಾಳೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು