ಸಿ.ಟಿ. ರವಿ ಭ್ರಷ್ಟಾಚಾರಕ್ಕೆ ನೀರೆರೆದು ಪೋಷಿಸುವ ಮಹಾನ್‌ ನಾಯಕ, ತಮ್ಮಯ್ಯ ವ್ಯಂಗ್ಯ

ಚಿಕ್ಕಮಗಳೂರು: ಸೋಲಿನ ಭೀತಿಯಿಂದ ಶಾಸಕ ಸಿ.ಟಿ.ರವಿ ಅವರು ಹಣ, ಹೆಂಡ, ಸೀರೆ ಹಂಚುವ ಮೂಲಕ ವಾಮ ಮಾರ್ಗದಲ್ಲಿ ಚುನಾವಣೆ ಎದುರಿ ಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿ ಎಚ್. ಡಿ.ತಮ್ಮಯ್ಯ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ೨೦ ವರ್ಷದಿಂದ ಶಾಸಕರಾಗಿದ್ದ ಸಿ.ಟಿ.ರವಿ ಅವರು ಮಾಡಿರುವ ಅಭಿವೃದ್ಧಿ ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಮತ ಕೇಳಬಹುದಿತ್ತು. ಅದನ್ನು ಬಿಟ್ಟು ಸೋಲಿನ ಭೀತಿಯಿಂದ ಮತದಾರರಿಗೆ ಹಣದ ಆಮಿಷ ತೋರಿಸಿ ಮತಸೆಳೆಯುವ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಕ್ಷೇತ್ರದ ಇತಿಹಾಸದಲ್ಲಿ ಅಭಿವೃದ್ಧಿ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ಮಾಡುವುದು ಹೇಗೆ ಎಂದು ತೋರಿಸಿದ್ದೇ ಸಿ.ಟಿ.ರವಿ ಎಂದು ದೂರಿದ ಅವರು ನಗರದ ಎಂಜಿ.ರಸ್ತೆ, ಐಜಿ ರಸ್ತೆ ಅಭಿವೃದ್ಧಿ ಹೆಸರಲ್ಲಿ ಕಳಪೆ ಕಾಮಗಾರಿ ನಡೆಸಿರುವ ಬಗ್ಗೆ ಸಾರ್ವಜನಿಕರು ಲೋಕಾಯುಕ್ತಕ್ಕೆ ದೂರು ನೀಡಿದ್ದು ಈ ಬಗ್ಗೆ ತನಿಖೆ ನಡೆಯುತ್ತಿರುವುದೇ ಇವರ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ಎಂಜಿ ರಸ್ತೆ ಫುಟ್‌ಪಾತ್‌ಗೆ ಹಾಕಿದ್ದ ಇಂಟರ್‌ಲಾಕ್‌ನ್ನು ತೆಗೆದು ಮತ್ತೆ ಅದನ್ನೆ ಜೋಡಿಸಿ ಹೊಸದಾಗಿ ಮಾಡಲಾಗಿದೆ ಎಂದು ಕಾಮಗಾರಿಯನ್ನು ತೋರಿಸಿ ಹಣ ಮಾಡುವ ಹುನ್ನಾರ ನಡೆಸುತ್ತಿದ್ದಾರೆ. ಐಜಿ ರಸ್ತೆ ಫುಟ್‌ಪಾತ್ ಸಂಪೂರ್ಣ ಕಳಪೆಯಾಗಿದೆ.

ಬಿಳೇಕಲ್ಲು, ಕುರುವಂಗಿ ರಸ್ತೆಗೆ ಡಾಂಬರ್ ಹಾಕಿದ್ದು ಕಳಪೆ ಕಾಮ ಗಾರಿಯಿಂದ ರಸ್ತೆ ಕಿತ್ತುಹೋಗಿದೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಎಲ್ಲ ಕಾಮಗಾರಿಗಳಲ್ಲಿ ಹಾಗೂ ನಗರದ ಎರಡು ಕೆರೆ ಅಭಿವೃದ್ಧಿಯಲ್ಲೂ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.
ಸಗಣಿ ಬಾಚೋ ಹೆಣ್ಣು ಮಕ್ಕಳಿಗೆ ೫ ರೂ ಹಾಲಿನ ಸಬ್ಸಿಡಿ ಕೊಡುತ್ತಿ ದ್ದೇವೆ ಎಂದು ಹೇಳುವ ಮೂಲಕ ರಾಜ್ಯದ ರೈತ ಹೆಣ್ಣು ಮಕ್ಕಳಿಗೆ ರವಿ ಅಪಮಾನ ಮಾಡಿದ್ದಾರೆ. ಕೂಡಲೇ ಅವರು ಹಣ್ಣುಮಕ್ಕಳ ಕ್ಷಮೆ ಕೇಳ ಬೇಕು. ಇಲ್ಲದಿದ್ದರೆ ಪ್ರತಿಭಟನೆ ಮೂಲಕ ಉತ್ತರ ನೀಡಬೇಕಾಗುತ್ತದೆ ಎಂದರು.

ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಮುಖಂಡ ರಾದ ಜಯರಾಜ್‌ಅರಸ್, ನಯಾ ಜ್, ಚಂದ್ರಪ್ಪ, ಪ್ರಕಾಶ್‌ರೈ, ತ್ರಿಭು ವನ್, ರೂಬಿನ್ ಮೊಸೆಸ್ ಇದ್ದರು.

Gayathri SG

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

12 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

36 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago