ಚಿಕಮಗಳೂರು

ಚಿಕ್ಕಮಗಳೂರು: ವೈಎಸ್‌ವಿ ದತ್ತ ವಿರುದ್ಧ 41 ಚೆಕ್ ಬೌನ್ಸ್ ಪ್ರಕರಣ

ಚಿಕ್ಕಮಗಳೂರು: ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್ ವಿ ದತ್ತ ಅವರ ವಿರುದ್ಧ ೪೧ ಚೆಕ್ ಬೌನ್ಸ್ ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ.

ಜೆಡಿಎಸ್ ಅಭ್ಯರ್ಥಿ ವೈಎಸ್‌ವಿ ದತ್ತಾ ವಿರುದ್ಧ೪೧ ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ನೀಡಿದ್ದಾರೆ. ೨೦೧೪ ರಿಂದ ೨೦೨೩ರ ವರೆಗೆ ರಾಜ್ಯ ಹೊರರಾಜ್ಯಗಳಲ್ಲಿ ೪೧ ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿವೆ.

ಚೆಕ್ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆ ೧೮೮೧ ರ ಕಲಂ ೧೩೮ರ ಅಡಿಯಲ್ಲಿ ದಾಖಲಾಗಿವೆ. ೨೦೧೪ರಿಂದ ೨೦೨೦ ಅವಧಿಯಲ್ಲಿ ಈ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.

ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಆಸ್ತಿ ವಿವರರಗಳು:
ವೈಎಸ್ ವಿ ದತ್ತಾ ಅವರ ಬಳಿ ೨೦೨೨-೨೩ ರಲ್ಲಿ ೮ ಲಕ್ಷದ ೧೫ ಸಾವಿರ ಆದಾಯ ಹೊಂದಿದ್ದಾರೆ.

ಚರಾಸ್ತಿ ಮತ್ತು ಸ್ಥಿರಾಸ್ತಿ ಎಷ್ಟು?:
೧೭.೮೯ ಲಕ್ಷ ಮೌಲ್ಯದ ಚರಾಸ್ತಿ,
೨.೯೪ ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ಸಾಲ ಎಷ್ಟು?:
ಒಟ್ಟು ೯೩.೧೬ ಲಕ್ಷ ಸಾಲ ಪಡೆದುಕೊಂಡಿದ್ದಾರೆ.

ನ್ಯಾಯಾಲಯದಲ್ಲಿ ಇರುವ ಪ್ರಕರಣಗಳು ಎಷ್ಟು?;
* ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ ೬ ಪ್ರಕರಣ,
* ಬೆಂಗಳೂರಿನ ಎಸಿಎಂಎಂ ೧೨, ೧೫,೧೮, ೧೯, ೨೩, ೨೬, ೩೬ನೇ ನ್ಯಾಯಾಲಯಗಳಲ್ಲಿ ತಲಾ ಒಂದು,
* ಬೆಂಗಳೂರಿನ ಎಸಿಎಂಎಂ ೨೨ ನೇ ನ್ಯಾಯಾಲಯದಲ್ಲಿ ಮೂರು,
* ೪೨ನೇ ನ್ಯಾಯಾಲಯದಲ್ಲಿ ೬ ಪ್ರಕರಣ,
* ಬೆಂಗಳೂರಿನ ಎಸ್ಸಿಸಿಎಚ್ ೬ನೇ ಮತ್ತು ೮ನೇ ನ್ಯಾಯಾಲಯಗಳಲ್ಲಿ ತಲಾ ಒಂದು,
* ಮಂಗಳೂರಿನ ಜೆಂಎಫ್ಸಿ ನ್ಯಾಯಾಲಯದಲ್ಲಿ ೫ ಮತ್ತು ೪ನೇ ಜೆಎಂಎಫ್ಸಿಯಲ್ಲಿ ೩ ಪ್ರಕರಣ,
* ಅಥಣಿ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಎರಡು,
* ಹಾಸನ ನ್ಯಾಯಾಲಯದಲ್ಲಿ ಎರಡು,

* ಹಾಸನ ಜಿಲ್ಲೆ ಬೇಲೂರು, ಹುಬ್ಬಳ್ಳಿ, ಗದಗ ನ್ಯಾಯಾಲಯಗಳಲ್ಲಿ ತಲಾ ಒಂದು.
* ಅನಂತಪುರ ನ್ಯಾಯಾಲಯದಲ್ಲಿ ಒಂದು,
* ಗುಂತಕಲ್ ನ್ಯಾಯಾಲಯದಲ್ಲಿ ಮೂರು ಪ್ರಕರಣ ದಾಖಲಾಗಿವೆ.

Gayathri SG

Recent Posts

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

4 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

19 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

37 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

53 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

1 hour ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

1 hour ago