ಚಿಕ್ಕಮಗಳೂರು: ಸ್ಕೂಟರ್ ಸವಾರನ ಮೇಲೆ ಬಿದ್ದ ಮರ, ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹಳ್ಳದ ಗಂಡಿ ಸಮೀಪದ ಚಿಕ್ಕ ಹಳ್ಳದ ಬಳಿ ಇಂದು ಸಂಜೆ ಸುರಿದ ಭಾರಿ ಮಳೆಗೆ ರಸ್ತೆ ಬದಿಯಲ್ಲಿದ್ದಂತಹ ಮರ ಸ್ಕೂಟರ್ ಸವಾರನ ಮೇಲೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಎಂದಿನಂತೆ ಹೋಂ ಸ್ಟೇ ಕೆಲಸಕ್ಕೆ ತೆರಳಲೆಂದು ಮೂಡಿಗೆರೆ ತಾಲೂಕಿನ ಹಳ್ಳದ ಗಂಡಿ ನಿವಾಸಿ ಸುಮಾರು ೫೮ ವರ್ಷದ ವೇಣುಗೋಪಾಲ್   ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಇಂದು ಸಂಜೆ ಸುಮಾರು ನಾಲ್ಕು ಗಂಟೆಗೆ ಸುರಿದ ಬಾರಿ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದಂತಹ ಮರ ಸ್ಕೂಟರ್ ಸವಾರನ ಮೇಲೆಯೇ ಬಿದ್ದ ಪರಿಣಾಮ ವ್ಯಕ್ತಿಯು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಧಿಕಾರಿಗಳು ಬಿದ್ದಂತಹ ಮರದ ಕೆಳಗೆ ಇರುವಂತಹ ಮೃತ ವ್ಯಕ್ತಿಯ ಶರೀರವನ್ನು ಸ್ಥಳೀಯರ ಸಹಾಯದೊಂದಿಗೆ ಬೇರ್ಪಡಿಸಿ ಪ್ರಕರಣವನ್ನು ದಾಖಲಿಸಿ ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ರವಾನಿಸಿದರು.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು  ಮಾತನಾಡಿ ಮಳೆಗಾಲ ಬಂತಂದರೆ ಮಲೆನಾಡಿನಲ್ಲಿ ರಸ್ತೆ ಬದಿಯಲ್ಲಿರುವಂತಹ ಮರಗಳು ಧರೆಗುರುಳುವುದು ಸಹಜ ಆದರೆ ಇಂತಹ ಸಮಸ್ಯೆಗಳು ಆಗುವುದಕ್ಕಿಂತ ಮುಂಚೆಯೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ರಸ್ತೆ ಬದಿಯಲ್ಲಿರುವಂತಹ ಮರಗಳನ್ನು ಕಡಿಯುವುದರ ಮುಖಾಂತರ ವರ್ಷಪೂರ್ತಿ ಮಳೆಗಾಲದಲ್ಲಿ ತಲೆದೋರುವಂತಹ ವಿದ್ಯುತ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ.  ಅದಲ್ಲದೆ ಮಳೆಗಾಲದಲ್ಲಿ ಆಗುವಂತಹ ಇಂತಹ ಅನಾಹುತಗಳನ್ನು ಕೂಡ ತಪ್ಪಿಸಬಹುದು ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Ashika S

Recent Posts

ಪ್ರಜ್ವಲ್ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಕೊಟ್ಟವರು ಯಾರು: ಸಲೀಂ ಅಹ್ಮದ್

ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…

1 hour ago

ಸಿಎನ್ ಜಿ ಇಂಧನ ನಿರಂತರ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…

1 hour ago

ಲಕ್ಷ್ಮೀ ಹೆಬ್ಬಾಳಕರ್ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ ನೇಹಾ ಹಿರೇಮಠ ತಂದೆ-ತಾಯಿ

ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…

2 hours ago

ಪ್ರಜ್ವಲ್ ಪ್ರಕರಣ ಕಾಂಗ್ರೆಸ್ ನಿಂದ ರಾಜಕೀಯ: ಅರವಿಂದ ಲಿಂಬಾವಳಿ ಆರೋಪ

ಪ್ರಜ್ವಲ್ ಲೈಂಗಿಕ ಹಗರಣದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.

2 hours ago

ಬಿಸಿಲಿನ ತಾಪದಿಂದ ಹೊಲದಲ್ಲಿ ಕೆಲಸಕ್ಕೆ ಹೋಗಿದ್ದ ರೈತ ಸಾವು

ಬಿಸಿಲಿನ ತಾಪದಿಂದ ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.

2 hours ago

ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಲಿ: ಮೊಯ್ಲಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಬೇಕು ಎಂಬ…

2 hours ago