News Karnataka Kannada
Saturday, May 04 2024
ಚಿಕಮಗಳೂರು

ಚಿಕ್ಕಮಗಳೂರು: ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಲು ಕರೆ

Call for greater focus on health
Photo Credit : News Kannada

ಚಿಕ್ಕಮಗಳೂರು: ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವಂತೆ ಸಂತ ಜೋಸೆಫರ ಚರ್ಚ್‌ನ ಸಹಾಯಕ ಗುರುಗಳಾದ ವಿನಯಕುಮಾರ್ ಹೇಳಿದರು.

ಅವರು ನಿನ್ನೆ ನಗರದ ಸಂತ ಜೋಸೆಫರ ಚರ್ಚ್‌ಗೆ ಸೇರಿದ ಶಾಲಾ ಆವರಣದಲ್ಲಿ ಮಲೆನಾಡು ಕ್ರೈಸ್ತರ ಅಭಿವೃದ್ಧಿ ಸಂಘ ಮತ್ತು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಉತ್ತಮ ಗುಣಮಟ್ಟದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾರ್ವಜನಿಕರು ಭಾಗವಹಿಸಿ ಇದರ ಉಪಯೋಗ ಪಡೆದುಕೊಂಡು ಆರೋಗ್ಯವಂತ ವ್ಯಕ್ತಿಗಳಾಗುವಂತೆ ಅವರು ಮನವಿ ಮಾಡಿದರು.

ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಎಲ್ಲರೂ ತಮ್ಮ ಸುತ್ತಮು ತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟು ಕೊಳ್ಳಬೇಕು. ಇಂತಹ ಒಳ್ಳೆಯ ಕಾರ್ಯ ಕ್ರಮವನ್ನು ಆಯೋಜಿಸಿರುವ ಮಲೆನಾಡು ಕ್ರೈಸ್ತರ ಅಭಿವೃದ್ಧಿ ಸಂಘವನ್ನು ಶ್ಲಾಘಿಸಿದರು.

ಮಲೆನಾಡು ಕೈಸ್ತರ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಪಿ.ಜೆ.ಪ್ರಾನ್ಸಿಸ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಶಿಬಿರದಲ್ಲಿ ಹೃದಯರೋಗ ತಜ್ಞರು, ಫಿಜಿಷೀಯನ್, ಮೂಳೆ ರೋಗ ತಜ್ಞರು, ಸ್ತ್ರೀ ರೋಗ ತಜ್ಞರು, ಇಎನ್‌ಟಿ ತಜ್ಞರು, ಮಕ್ಕಳ ತಜ್ಞರು, ಕಣ್ಣಿನ ತಜ್ಞರು, ಚರ್ಮ ರೋಗ ತಜ್ಞರು ಭಾಗವಹಿಸಿದರಲ್ಲದೆ ಪ್ರಯೋಗಾಲಯದಲ್ಲಿ ಉಚಿತವಾಗಿ ರಕ್ತ ಪರೀಕ್ಷೆ, ಇಸಿಜಿ, ಕಣ್ಣಿನ ಪರೀಕ್ಷೆ ಕಿವಿ ಮತ್ತು ಗಂಟಲು ಪರೀಕ್ಷೆಗಳನ್ನು ಹೊಸ ತಂತ್ರಜ್ಞಾನದೊಂದಿಗೆ ರೋಗಿಗಳನ್ನು ಪರೀಕ್ಷೆ ಮಾಡಿ ಉಚಿತವಾಗಿ ಔಷಧಿ ಗಳನ್ನು ವಿತರಣೆ ಮಾಡಲಾಯಿತು.

ಸುಮಾರು ೩೦೮ ಜನರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ನಡೆಸಲಾ ಯಿತು ಎಂದು ಸಂಘದ ಕಾರ್ಯ ದರ್ಶಿಗಳಾದ ಸತ್ಯರಾಜ್ ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ಎಲ್ಲಾ ನಿರ್ದೇಶಕರು ಳು ಈ ಶಿಬಿರದಲ್ಲಿ ಭಾಗವಹಿಸಿ ಸಹಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು