News Karnataka Kannada
Tuesday, April 30 2024
ಚಿಕಮಗಳೂರು

ಚಿಕ್ಕಮಗಳೂರು: ಸರ್ಕಾರಿ ಭೂಮಿಯನ್ನು ಬಡ ರೈತರಿಗೆ ವಿತರಿಸಲು ಒತ್ತಾಯ

Chikkamagaluru: Demand to distribute government land to poor farmers
Photo Credit : News Kannada

ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಸರ್ಕಾರಿ ಭೂಮಿಯನ್ನು ಜಮೀನು ಇಲ್ಲದ ಬಡರೈತರಿಗೆ ವಿತರಣೆ ಮಾಡುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರನ್ನು ಭೇಟಿ ಮಾಡಿದ ಸಂಘಟನೆಯ ಮುಖಂಡರು ಈ ಸಂಬಂಧ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ೪,೫೩೦ ಎಕರೆಯಷ್ಟು ಸರ್ಕಾರಿ ಭೂಮಿ ಇದೆ. ಅದು ಕೆಲವೆಡೆ ಉಪಯೋಗಕ್ಕೆ ಬಾರದೆ ಪಾಳು ಬಿದ್ದಿದ್ದರೆ, ಉಳಿದ ಭೂಮಿ ಅರಣ್ಯ ಇಲಾಖೆ ಮತ್ತು ಬಲಾಡ್ಯರ ಅದೀನದಲ್ಲಿದೆ ಎಂದರು.

ಜಿಲ್ಲೆಯಲ್ಲಿ ಬಿತ್ತನೆ ಮಾಡಿ ಬೆಳೆ ಬೆಳೆಯಲು ಭೂಮಿ ಇಲ್ಲದೆ ಬಹಳಷ್ಟು ರೈತ ಕುಟುಂಬಗಳು ಕೂಲಿ, ನಾಲಿ ಮಾಡಿ ಬದುಕುತ್ತಿವೆ. ಒಂದು ಹೊತ್ತಿನತುತ್ತಿಗೂ ಆ ಸಂಸಾರಗಳು ಪರದಾಡುತ್ತಿವೆ ಎಂದು ಹೇಳಿದರು. ಜಿಲ್ಲಾಡಳಿತ ಅರಣ್ಯ ಇಲಾಖೆ ಮತ್ತು ಬಲಾಢ್ಯರ ವಶದಲ್ಲಿರುವ ಸರ್ಕಾರಿ ಭೂಮಿಯನ್ನು ಬಿಡಿಸಿಕೊಂಡು ಅದನ್ನು ಭೂಹೀನ ಬಡರೈತ ಕುಟುಂಬಗಳಿಗೆ ನೀಡಿದರೆ ಅವರ ಬದುಕು ಹಸನಾಗುತ್ತದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೂಡಲೇ ಕಾರ್ಯ ಪ್ರವೃತ್ತವಾಗಬೇಕು ಎಂದು ಆಗ್ರಹಿಸಿದರು. ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ರಾಜ್ಯಾಧ್ಯಕ್ಷ ಸೋಮಾ ನಾಯಕ್, ತಾಲೂಕು ಅಧ್ಯಕ್ಷ ಗಿರೀಶ್, ಜಂಟಿ ಕಾರ್ಯದರ್ಶಿ ನಂದನ್, ಸಂಘಟನಾ ಕಾರ್ಯದರ್ಶಿ ಯುಸೂಫ್, ಮಹಿಳಾ ಘಟಕದ ಕಾರ್ಯದರ್ಶಿ ಮಂಜುಳಾ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು