ಚಿಕ್ಕಮಗಳೂರು: ಆಪರೇಷನ್ ಥಿಯೇಟರ್‌ನಲ್ಲಿ ಟೈಟಾಗಿ ಮಲಗಿದ್ದ ವೈದ್ಯ

ಚಿಕ್ಕಮಗಳೂರು: ಕುಡಿದು ಬಂದು ಆಪರೇಷನ್ ಥಿಯೇಟರ್‌ನಲ್ಲಿ ಮಲಗಿದ್ದ ವೈದ್ಯನನ್ನು ಬಚಾವ್ ಮಾಡಿಸುವ ಸಲುವಾಗಿ ಸಿಬ್ಬಂದಿ ವಿಷ್ಣುಸೇನಾ ಚಿತ್ರದ ಪಾರ್ಟ್ ೨ ಕಥೆ ಹೆಣೆದ ಘಟನೆ ಚಿಕ್ಕಮಗಳೂರಿನ ಕಳಸ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಸಂತಾನಹರಣ ಕ್ಯಾಂಪ್ ಏರ್ಪಾಡು ಮಾಡಿದ್ದು, ಮಹಿಳೆಯರಿಗೆ ಬರಲು ಹೇಳಿದ್ದರು. ಕ್ಯಾಂಪ್‌ಗೆ ೧೦ಕ್ಕೂ ಹೆಚ್ಚು ಮಹಿಳೆಯರು ತಮ್ಮ ಮಕ್ಕಳನ್ನು ಬಿಟ್ಟು ಬಂದಿದ್ದರು.

ಆಪರೇಷನ್ ಮಾಡುವ ಸಲುವಾಗಿ ಕೊಪ್ಪ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ೩ ಗಂಟೆಗೆ ಬಂದಿದ್ದ. ಬರುತ್ತಲೇ ಫುಲ್ ಟೈಟ್ ಆಗಿದ್ದ ಈತ ಸಂತಾನಹರಣ ಚಿಕಿತ್ಸೆ ಮಾಡಬೇಕಾದ ಆಪರೇಷನ್ ಬೆಡ್ ಮೇಲೆ ಮಲಗಿ ದ್ದಾನೆ. ಇದರಿಂದಾಗಿ ಅನಸ್ತೇಷಿಯಾ ತೆಗೆದುಕೊಂಡು ಮಲಗಿದ್ದ ಮಹಿಳೆಯರು ರೆಬಲ್ ಆಗಿದ್ದಾರೆ.

ಈ ವೇಳೆ ಸಿಬ್ಬಂದಿ ವೈದ್ಯರಿಗೆ ಏನೋ ಆಗಿದೆ. ಶುಗರ್ ಕಡಿಮೆ ಆಗಿದೆ, ಬಿಪಿ ಜಾಸ್ತಿ ಆಗಿದೆ ಎಂದು ವಿಷ್ಣುಸೇನಾ ಚಿತ್ರದ ಪಾರ್ಟ್ ೨ ಸನ್ನಿವೇಶ ಸೃಷ್ಟಿಸಿ ಹೈಡ್ರಾಮಾ ಮಾಡಿದ್ದಾನೆ. ಅಲ್ಲದೇ ವೈದ್ಯರಿಗೆ ಗ್ಲೂಕೋಸ್ ಹಾಕಿಸಿ ವಾಪಸ್ ಕೊಪ್ಪಕ್ಕೆ ಕಳುಹಿಸಲಾಗಿದೆ. ಅನಸ್ತೇಷಿಯಾ ತೆಗೆದುಕೊಂಡು ಮಲಗಿದ್ದ ಮಹಿಳೆಯರಿಗೆ ಆಸ್ಪತ್ರೆ ಸಿಬ್ಬಂದಿ ಗ್ಲೂಕೋಸ್ ಹಾಕಿದ್ದಾರೆ. ಗುರುವಾರ ಮತ್ತೆ ಬೇರೆ ವೈದ್ಯರನ್ನು ಕರೆಸಿ ಆಪರೇಷನ್ ಮಾಡಿಸಲು ಸಿದ್ಧತೆ ನಡೆಸಲಾಗಿದೆ.

ಸಿಬ್ಬಂದಿಗಳ ಈ ವರ್ತನೆಗೆ ಆಸ್ಪತ್ರೆಗೆ ಆಗಮಿಸಿದ್ದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಹಿಡಿ ಶಾಫ ಹಾಕಿದ್ದಾರೆ.
ಸುದ್ದಿ ತಿಳಿದ ಬಳಿಕ ಡಿ.ಹೆಚ್.ಓ ಉಮೇಶ್ ಅವರು ಈ ಕುರಿತು ಪರಿಶೀಲನೆ ನಡೆಸುವ ಭರವಸೆ ನೀಡಿದ್ದಾರೆ. ವೈದ್ಯನ ಅಮಾನತಿಗೆ ಸಚಿವ ದಿನೇಶ್ ಗುಂಡೂರಾವ್ ಆದೇಶ ನೀಡಿದ್ದು ತಪ್ಪಿತಸ್ಥರ ವಿರುದ್ಧ ವಿಚಾರಣೆಗೆ ಆದೇಶ ನೀಡಿದ್ದಾರೆ.

Sneha Gowda

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

36 mins ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

48 mins ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

59 mins ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

1 hour ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

1 hour ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

2 hours ago