News Karnataka Kannada
Monday, April 29 2024
ಚಿಕಮಗಳೂರು

ಚಿಕ್ಕಮಗಳೂರು: ಮುಸ್ಲಿಂ ಮಹಿಳೆ ಮನೆಗೆ ಹೋದ ಹಿಂದು ಯುವಕನಿಗೆ ಹಲ್ಲೆ

hindu-man-attacked-for-going-to-muslim-womans-house
Photo Credit : News Kannada

ಚಿಕ್ಕಮಗಳೂರು: ಮುಸ್ಲಿಂ ಮಹಿಳೆ ಮನೆಗೆ ಹೋಗಿದ್ದ ಎಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ಮೇ. 26 ರಂದು ನಡೆದಿದೆ.

ಅಜಿತ್ ಎಂಬ ಯುವಕನ ಮೇಲೆ ದಾಳಿ ನಡೆದಿದ್ದು, ಐದಕ್ಕೂ ಹೆಚ್ಚು ಜನರು ಹಲ್ಲೆ ನಡೆಸಿರುವುದಾಗಿ ಗಾಯಾಳು ಅಜಿತ್ ಆರೋಪಿಸಿದ್ದಾರೆ. ಸುಹೇಬ್ ಸೇರಿದಂತೆ ಹಲವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಜಿತ್ ಆರೋಪಿಸಿದ್ದಾರೆ. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದಿರೋ ಅಜಿತ್, ಕಾಂಗ್ರೆಸ್ ಸರ್ಕಾರ, ಎಂಎಲ್ಎ ಬಂದ್ಮೇಲೆ ಈ ರೀತಿ ಆಗುತ್ತಿದೆ ಎಂದಿದ್ದಾರೆ.

ಸದ್ಯ ಮೂಡಿಗೆರೆ ಆಸ್ಪತ್ರೆಯಲ್ಲಿ ಅಜಿತ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದಿರುವ ಅಜಿತ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ರೀತಿ ಆಗುತ್ತಿದೆ ಎಂದಿದ್ದಾರೆ. ಸದ್ಯ ಹಲ್ಲೆಗೊಳಗಾದ ಅಜಿತ್‌ ಮೂಡಿಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು