ಚಿಕಮಗಳೂರು

ಚಿಕ್ಕಮಗಳೂರು: ಬಾಲ ವ್ಯಕ್ತಿತ್ವ ಸರ್ವಾಂಗೀಣ ವಿಕಾಸ ಶಿಬಿರ ಉದ್ಘಾಟನೆ

ಚಿಕ್ಕಮಗಳೂರು: ನಗರದ ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯ, ಜ್ಞಾನ ಪ್ರಕಾಶ ಭವನದಲ್ಲಿ ೫ ದಿನಗಳ ಕಾಲ ನಡೆಯುವ ಬಾಲ ವ್ಯಕ್ತಿತ್ವ ಸರ್ವಾಂಗೀಣ ವಿಕಾಸ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪತ್ನಿ ರಜನಿ ಜಿ.ಪ್ರಭು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಭಾರತದಲ್ಲಿ ಆಧ್ಯಾತ್ಮಿಕತೆಗೆ ವಿಶೇಷ ಮಹತ್ವ ಇದೆ, ಇಂತಹ ಕಾರ್ಯಕ್ರಮ ಗಳು ಮಕ್ಕಳ ಸೃಜನಾತ್ಮಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗ ಳಾದ ಜಿಲ್ಲಾ ಆಸ್ಪತ್ರೆಯ ಡಾ.ವಿನಯ್ ಮಾತನಾಡಿ ಮಕ್ಕಳು ಬೆಳವಣಿಗೆಯ ಜೊತೆಗೆ ಒಳ್ಳೆಯ ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಸರ್ವೋದಯ ಸಂಸ್ಥೆಯ ಸಿದ್ದರಾಮು, ಬ್ರಹ್ಮಾಕುಮಾರೀಸ್ ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ, ಭಾಗ್ಯ ಮತ್ತಿತರರು ಪಾಲ್ಗೊಂಡಿದ್ದರು.

ಶಿಬಿರವು ಮೌಲ್ಯ ಶಿಕ್ಷಣದ ಗೇಮ್ಸ್, ಚಿತ್ರಕಲೆ, ಕ್ರಾಫ್ಟ್, ಆರೋಗ್ಯದ ಬಗ್ಗೆ ಮಾಹಿತಿ, ದೇಶಭಕ್ತಿ, ಕ್ವಿಜ್, ಮೆಮೋರಿ ಟೆಸ್ಟ್, ಯೋಗಾಸನ, ಪ್ರಾಣಾಯಾಮ, ಆಧ್ಯಾತ್ಮಿಕ ಅದ್ಬುತ ರಹಸ್ಯ, ಪ್ರಬಂಧ ಇನ್ನಿತರ ವಿಷಯಗಳಿಂದ ಕೂಡಿರುತ್ತದೆ. ೫ ದಿನಗಳ ಕಾಲ ಶಿಬಿರ ಮುಂದುವರಿಯುತ್ತಿದೆ.

ಶಿಬಿರದಲ್ಲಿ ೧೦೦ ಜನ ಮಕ್ಕಳು, ಈಶ್ವರೀಯ ವಿದ್ಯಾರ್ಥಿಗಳು(ಶಿಕ್ಷಕರು) ಭಾಗವಹಿಸಿದ್ದರು. ಎಲ್ಲರಿಗೂ ಶಿವಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago