News Karnataka Kannada
Sunday, April 28 2024
ಚಿಕಮಗಳೂರು

ಚಿಕ್ಕಮಗಳೂರು: ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆರೋಪ- ಕೈ ಪ್ರತಿಭಟನೆ

Modi government alleges murder of democracy
Photo Credit : News Kannada

ಚಿಕ್ಕಮಗಳೂರು: ಕೇಂದ್ರ ಸರಕಾರ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಸರಕಾರದ ದುರಾಡಳಿತದ ಬಗ್ಗೆ ಟೀಕಿಸುವವರ ಹೋರಾಟದ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವದಿಂದ ಅನರ್ಹಗೊ ಳಿಸುವ ಮೂಲಕ ಮೋದಿ ಸರಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ನಗರದಲ್ಲಿಂದು ಪ್ರತಿ ಭಟನೆ ನಡೆಸಿದರು.

ರಾಹುಲ್‌ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹ ಗೊಳಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಹನು ಮಂತಪ್ಪ ವೃತ್ತದಲ್ಲಿ ಇಂದು ಹಮ್ಮಿ ಕೊಂಡಿದ್ದ ಪ್ರತಿಭಟನೆಯಲ್ಲಿ ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಮಾತನಾಡಿ ಮೋದಿ ಸರಕಾರ ಅಂಬಾನಿ, ಅದಾನಿಯಂತಹ ಶ್ರೀಮಂತರ ಪರ ಆಡಳಿತ ನಡೆಸುತ್ತಿದೆ. ಮೋದಿ ಸರಕಾರದ ಈ ಆಡಳಿತದ ನೀತಿಗಳಿಂದಾಗಿ ನೀರವ್ ಮೋದಿ, ಮಲ್ಯ ಅವರಂತಹ ಬಂಡವಾಳಶಾಹಿ ಗಳು ಸರಕಾರದ ಖಜಾನೆಗೆ ಕೋಟ್ಯಂತರ ರೂ. ನಷ್ಟ ಮಾಡಿ ದೇಶ ಬಿಟ್ಟು ಪರಾರಿಯಾಗಿರುವುದು ಜಗಜ್ಜಾಹೀ ರಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಈ ಹಿಂದೆ ಮೋದಿ ಹೆಸರಿನ ಕಳ್ಳರು ಸಾಕಷ್ಟು ಮಂದಿ ದೇಶದಲ್ಲಿದ್ದಾರೆಂದು ಟೀಕಿಸಿದ್ದಾರೆ.

ಈ ಹೇಳಿಕೆ ವಿರುದ್ಧ ಗುಜರಾತ್‌ನ ಸೂರತ್ ನ್ಯಾಯಾಲಯದಲ್ಲಿ ಪೂರ್ಣೇಶ್ ಮೋದಿ ಎಂಬುವ ವರು ದೂರು ದಾಖಲಿಸಿದ್ದು, ಈ ದೂರಿನ ವಿಚಾರಣೆ ನಡೆಸಿದ ನ್ಯಾಯಾಧೀಶರು ರಾಹುಲ್ ವಿರುದ್ಧ ತೀರ್ಪು ನೀಡಿ ೨ ವರ್ಷಗಳ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ಮೇಲ್ಮನವಿ ಸಲ್ಲಿಸಲು ಕಾಲಾವಕಾಶವನ್ನೂ ನೀಡಿ ದ್ದಾರೆ. ಆದರೆ ಪ್ರಧಾನಿ ಮೋದಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿ ಕೊಂಡು ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವದಿಂದ ಅನರ್ಹ ಗೊಳಿಸಿದ್ದಾರೆ. ರಾಹುಲ್ ಗಾಂಧಿ ಅವರು ಸಂಸತ್‌ನಲ್ಲಿ ಕೇಂದ್ರ ಸರಕಾ ರದ ಜನವಿರೋಧಿ ನೀತಿಗಳ ಬಗ್ಗೆ ಧ್ವನಿ ಎತ್ತುತ್ತಿದ್ದು, ಈ ಭೀತಿಯಿಂದಲೇ ಕೇಂದ್ರ ಸರಕಾರ ಈ ಕ್ರಮಕೈಗೊಂಡಿದೆ. ಇದು ಸಂವಿಧಾನ ವಿರೋಧಿ ಕೃತ್ಯವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ ಮಾತನಾಡಿ, ರಾಹುಲ್ ಗಾಂಧಿ ಅವರು ಅಂಬೇ ಡ್ಕರ್ ಸಂವಿಧಾನದ ಆಶಯಗಳ ಈಡೇರಿಕೆಗಾಗಿ ಜನರ ಪರವಾಗಿ ಹೋರಾಟ ನಡೆಸುತ್ತಿದ್ದಾರೆ. ಬಡ ವರು, ಕಾರ್ಮಿಕರು, ರೈತರು, ಮಹಿ ಳೆಯರು ಸೇರಿದಂತೆ ಎಲ್ಲ ವರ್ಗಗಳ ಶೋಷಿತರ ಪರವಾಗಿ ಧ್ವನಿ ಎತ್ತುತ್ತಿ ದ್ದಾರೆ. ಕೇಂದ್ರ ಸರಕಾರ ಜನ ವಿರೋ ಧಿ ನೀತಿಗಳ ವಿರುದ್ಧ ಜನಜಾಗೃತಿ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಹೋರಾಟದಿಂದ ಕೇಂದ್ರ ಸರಕಾರದ ವೈಫಲ್ಯಗಳು ಬಟಾಬಯಲಾ ಗುತ್ತಿದ್ದು, ಇದರಿಂದ ಬೆದರಿರುವ ಮೋದಿ ಸರಕಾರ ಸಂವಿಧಾನಿಕ ಸಂಸ್ಥೆಗಳ ಆಡಳಿ ತದಲ್ಲಿ ಹಸ್ತಕ್ಷೇಪ ಮಾಡಿ ಹೋರಾಟಗಾರರ ಧ್ವನಿ ಅಡಗಿಸುತ್ತಿದೆ ಎಂದು ಟೀಕಿಸಿದರು.

ಮಾಜಿ ಎಮ್ಮೆಲ್ಸಿ ಗಾಯತ್ರಿ ಶಾಂತೇಗೌಡ ಮಾತನಾಡಿ, ೨೦೧೯ರಲ್ಲಿ ರಾಹುಲ್‌ಗಾಂಧಿ ಕರ್ನಾಟಕದಲ್ಲಿ ನೀಡಿದ್ದ ಹೇಳಿಕೆ ವಿರುದ್ಧ ಮೋದಿ ಸರಕಾರ ಗುಜರಾತ್‌ನಲ್ಲಿ ದೂರು ದಾಖಲಿಸಿರುವುದು ಹೇಡಿತನದ ಕೃತ್ಯ ವಾಗಿದೆ. ಶಿಕ್ಷೆ ವಿರುದ್ಧ ನ್ಯಾಯಾಲಯ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ನೀಡಿದ್ದರೂ ಮೋದಿ ಸರಕಾರ ಅಧಿಕಾರ ದುರ್ಬಳಕೆ ಮಾಡಿಕೊಂ ಡು ಸಂಸತ್ ಸದಸ್ಯತ್ವದಿಂದ ಅನರ್ಹ ಗೊಳಿಸಿರುವುದು ರಾಹುಲ್‌ಗಾಂಧಿ ಅವರ ಹೋರಾಟದ ಧ್ವನಿಯನ್ನು ಅಡಗಿಸುವ ಹುನ್ನಾರವಾಗಿದೆ. ಮೋದಿ ಸರಕಾರದ ಆಡಳಿತದಿಂದಾಗಿ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ನಾಶವಾಗುತ್ತಿದ್ದು, ಸರ್ವಾಧಿಕಾರದ ಆಡಳಿತ ಜಾರಿಯಾಗುತ್ತಿದೆ. ಸರ ಕಾರದ ನೀತಿಗಳನ್ನು ಪ್ರಶ್ನಿಸುವವ ರನ್ನು ಜೈಲಿಗೆ ಕಳುಹಿಸಲಾ ಗುತ್ತಿದ್ದು, ಇದು ಮೋದಿ ಅಂತ್ಯಕಾಲ ಸಮೀಪಿ ಸುತ್ತಿರುವುದರ ಸಂಕೇತವಾಗಿದೆ ಎಂದರು.

ಜಿಪಂ ಮಾಜಿ ಸದಸ್ಯ ಕೆ.ಮಹ ಮ್ಮದ್ ಮಾತನಾಡಿ, ಮೋದಿ ಸರ ಕಾರ ಸಂವಿಧಾನ ವಿರೋಧಿ ಸರಕಾರ ವಾಗಿದೆ. ಮೋದಿ ಆಡಳಿತದಲ್ಲಿ ಅಭಿವೃಕ್ತಿ ಸ್ವಾತಂತ್ರ್ಯದ ಹರಣವಾಗು ತ್ತಿದೆ. ದಲಿತರು, ಅಲ್ಪಸಂಖ್ಯಾತರೂ ಸೇರಿದಂತೆ ಸರಕಾರದ ನೀತಿಗಳ ವಿರು ದ್ಧ ಧ್ವನಿ ಎತ್ತುವವರನ್ನು ದೇಶದ್ರೋ ಹದ ಆರೋಪ ಹೊರಿಸಲಾಗುತ್ತಿದೆ. ಬಡವರು ಅನುಭವಿಸುತ್ತಿರುವ ಕಷ್ಟಗಳ ಬಗ್ಗೆ ಮಾತನಾಡುವವರ ವಿರುದ್ಧ ಸ್ವಾಯತ್ತ ಸಂಸ್ಥೆಗಳ ಮೂ ಲಕ ಹತ್ತಿಕ್ಕಲಾಗುತ್ತಿದೆ. ಬಿಜೆಪಿಯ ವರಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲವಾಗಿದ್ದು, ಈ ಸರಕಾರ ತೊಲಗ ದಿದ್ದಲ್ಲಿ ದೇಶದ ಐಕ್ಯತೆ, ಸಾಮರಸ್ಯ, ಅಭಿವೃದ್ಧಿ ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಶಿವಾನಂz ಸ್ವಾಮಿ, ಹಿರೇಮಗಳೂರು ಪುಟ್ಟಸ್ವಾಮಿ, ರೂಬೆನ್ ಮೋಸೆಸ್ ಮತ್ತಿತರರು ಮಾತನಾಡಿದರು.

ಇದಕ್ಕೂ ಮುನ್ನ ತಾಲೂಕು ಕಚೇರಿಯಿಂದ ಹನುಮಂತಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕೇಂದ್ರದ ಮೋದಿ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಬಳಿಕ ಹನುಮಂತಪ್ಪ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರಕಾರದ ನಿಲು ವನ್ನು ಖಂಡಿಸಲಾಯಿತು. ಪ್ರತಿಭಟನೆಯಲ್ಲಿ ಮಾಜಿ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್, ಮುಖಂಡರಾದ ಎಚ್.ಡಿ.ತಮ್ಮಯ್ಯ, ಬಿ.ಎಚ್.ಹರೀಶ್, ಎಚ್.ಎಚ್.ದೇವ ರಾಜ್, ರಸೂಲ್ ಖಾನ್, ಸಿ.ಎನ್. ಅಕ್ಮಲ್, ರಮೇಶ್, ರವೀಶ್, ಜಯ ರಾಜ್ ಅರಸ್ ಮತ್ತಿತರರು ಭಾಗವ ಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು