News Karnataka Kannada
Sunday, April 21 2024
Cricket
ಚಿಕಮಗಳೂರು

ಚಿಕ್ಕಮಗಳೂರು: ರಸ್ತೆ ಸಂಪರ್ಕವಿಲ್ಲದೆ ರೋಗಿಯನ್ನು ಜೋಳಿಗೆಯಲ್ಲಿ ಹೊತ್ತು ತಂದ ಜನ

Chikkamagaluru: People carry a patient without road connectivity
Photo Credit : News Kannada

ಚಿಕ್ಕಮಗಳೂರು: ಸ್ವಾತಂತ್ರ್ಯ ಬಂದು ಹಲವು ದಶಕಗಳೇ ಕಳೆದರೂ ಇಂದಿಗೂ ನಮ್ಮ ಗ್ರಾಮಗಳು ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಕೊರತೆ ಎದುರಿಸುತ್ತಿರುವುದು ನಮ್ಮನ್ನಾಳುವ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಅಲ್ಲದೇ ಬೇರೇನಲ್ಲ. ಅದೇ ರೀತಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ಹಲವು ಪ್ರದೇಶಗಳಿದ್ದು, ಜನರು ರಸ್ತೆಗಳಿಲ್ಲದೆ ದ್ವೀಪದಂತಹ ಪ್ರದೇಶದಲ್ಲಿ ಜೀವನ ಸಾಗಿಸುತ್ತಿರುವುದು ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಂತಿದೆ.

ಸೂಕ್ತ ರಸ್ತೆ ಇಲ್ಲದ ವಯೋವೃದ್ಧೆಯನ್ನು ಜೋಳಿಗೆಯಲ್ಲಿ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸುವ ಪರಿಸ್ಥಿತಿ ಜಿಲ್ಲೆಯಲ್ಲಿ ಇಂದಿಗೂ ಜೀವಂತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಕೋಡು ಗ್ರಾಮದಲ್ಲಿ ನಡೆದಿದೆ. 70 ವರ್ಷದ ಶೇಷಮ್ಮರನ್ನು ಕುಟುಂಬಸ್ಥರು ಸುಮಾರು 1 ಕಿ.ಮೀ.ಜೋಳಿಗೆಯಲಿ, ಹೊತ್ತು ತಂದು ಆಸತ್ರೆಗೆ ದಾಖಲಿಸಿದ್ದಾರೆ. ಸೂಕ್ತ ರಸ್ತೆ ಇಲ್ಲದ ಕಾರಣ ಜೋಳಿಗೆಯಲ್ಲಿ ಹೊತ್ತು ತಂದಿದ್ದಾರೆ. ಗ್ರಾಮದಲ್ಲಿ ಸುಮಾರು 10ಕ್ಕೂ ಹೆಚ್ಚು ಮನೆ 30-40 ಜನಸಂಖ್ಯೆಯ ಕಾಡಂಚಿನ ಕುಗ್ರಾಮಗಳಿವೆ, ಆದರೆ ಓಡಾಡಲು ಸೂಕ್ತ ರಸ್ತೆ ಇಲ್ಲ.

ಕಲ್ಕೋಡು ಗ್ರಾಮದಿಂದ ಕಳಸ ತಾಲೂಕಿಗೆ ಬರಬೇಕು ಅಂದರೆ 4 ಕಿ.ಮೀ. ಆಗುತ್ತದೆ. 3-4 ಕಿ.ಮೀ. ಬಂದರೆ ಆಟೋ ಸಿಗುತ್ತೆ ಆದರೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಅಧಿಕಾರಿಗಳು ರಸ್ತೆ ಬಿಡುತ್ತಿಲ್ಲ, ರಸ್ತೆಗಾಗಿ ಸಾಕಷ್ಟು ಬಾರಿ ಮನವಿ ಮಾಡಿದ್ದರು. ಅಧಿಕಾರಿಗಳು, ಜನನಾಯಕರು ಈವರೆಗೂ ಯಾರೂ ಕೂಡ ಸ್ಪಂದಿಸಿಲ್ಲ ಎಂದು ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು