ಚಿಕ್ಕಮಗಳೂರು: ಉತ್ತಮ ವಿಚಾರಗಳನ್ನು ಅಳವಡಿಸಿಕೊಳ್ಳುವುದೇ ವ್ಯಕ್ತಿತ್ವ ವಿಕಸನ- ಮೇಟಿ

ಚಿಕ್ಕಮಗಳೂರು: ಪ್ರತಿಯೊಬ್ಬರ ಬದುಕಿನ ಉತ್ತಮ ವಿಚಾರ, ಆದರ್ಶ ಹಾಗೂ ಪ್ರೇರಣೆಯನ್ನು ಕಾರಾಗೃಹ ಬಂಧಿಗಳು ಜೀವನದಲ್ಲಿ ಮೈಗೂಡಿಸಿಕೊಳ್ಳುವುದೇ ವ್ಯಕ್ತಿತ್ವ ವಿಕಸನ ಮೂಲ ಧ್ಯೇಯ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಶ್ರೀಶೈಲ ಎಸ್.ಮೇಟಿ ಹೇಳಿದರು.

ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ವತಿಯಿಂದ ನಗರದ ಕಾರಾಗೃಹದಲ್ಲಿ ಕಾರಾಗೃಹವಾಸಿಗಳಿಗೆ ಏರ್ಪಡಿಸಲಾಗಿದ್ದ ಬಂಧಿಗಳ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮನರಂಜನೆ ಎಂಬುದು ವ್ಯಕ್ತಿತ್ವ ವಿಕಸನ ಒಂದು ಭಾಗವಾಗಿದೆ. ಆ ನಿಟ್ಟಿನಲ್ಲಿ ಕಾರಾಗೃಹವಾಸಿಗಳು ತಮ್ಮತನವನ್ನು ಬೆಳೆಸಿಕೊಳ್ಳುತ್ತಾ ವಿಕಸನ ದಲ್ಲಿ ಭಾಗವಹಿಸಬೇಕು. ಬದುಕಿನಲ್ಲಿ ಉತ್ತಮ ಚಿಂತನೆ, ತಾಳ್ಮೆ ಹಾಗೂ ಶಾಂತಿಯಿಂದ ವ್ಯಕ್ತಿತ್ವ ವಿಕಸನ ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು. ದೇಶ ಹಾಗೂ ನಾಡಿನಲ್ಲಿ ಅನೇಕ ಮಂದಿ ಮಹಾನೀಯರು ಉತ್ತಮ ಸೇವೆಯನ್ನು ಸಲ್ಲಿಸಿದ್ದಾರೆ. ಅಂತಹವರ ವ್ಯಕ್ತಿತ್ವವನ್ನು ಪ್ರತಿಯೊಬ್ಬರು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಸತ್ಪಜೆಯಾಗಿ ಜೀವಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಮನಃಶಾಸ್ತ್ರದ ಚಿಂತಕ ಫಾದರ್ ವಿನಯ್ ಮಾತನಾಡಿ ಆಕಸ್ಮಿಕ ನಡೆಯುವ ತಪ್ಪುಗಳಿಂದ ಕೆಲವು ಮಂದಿ ಕಾರಾವಾಸಿಗಳಾಗುತ್ತಾರೆ. ಇರುವಷ್ಟು ದಿನಗಳಲ್ಲಿ ಇತರರಿಂದ ಉತ್ತಮ ವ್ಯಕ್ತಿತ್ವವನ್ನು ಪಡೆದುಕೊಳ್ಳ ಬೇಕು. ಬಿಡುಗಡೆ ನಂತರ ಸಾತ್ವಿಕ ಜೀವನ ನಡೆಸಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಾಮಾಜಿಕ ಸೇವಾ ನಿರ್ದೇಶಕ ಪ್ರದೀಪ್, ಯುವ ನಿರ್ದೇಶಕ ಸಚ್ಚಿನ್, ಜೈಲರ್ ಎಂ.ಕೆ.ನೆಲಧರಿ, ಕಾರಾಗೃಹ ಸಿಬ್ಬಂದಿಗಳು ಹಾಗೂ ಕಾರಾಗೃಹಬಂಧಿಗಳು ಉಪಸ್ಥಿತರಿದ್ದರು.

Gayathri SG

Recent Posts

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

13 mins ago

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

39 mins ago

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ…

48 mins ago

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

1 hour ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

1 hour ago

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

1 hour ago