News Karnataka Kannada
Friday, May 03 2024
ಚಿಕಮಗಳೂರು

ಚಿಕ್ಕಮಗಳೂರು: ರಾಜ್ಯಸಭಾ ಸದಸ್ಯರ ನೇತೃತ್ವದಲ್ಲಿ ವಿವಿಧ ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ

Rajya Sabha mps quit various parties and join Congress
Photo Credit : News Kannada

ಚಿಕ್ಕಮಗಳೂರು: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಯು ಮಾಜಿ ಜಿಲ್ಲಾಧ್ಯಕ್ಷ ಕೆ.ಭರತ್ ಸೇರಿದಂತೆ ವಿವಿಧ ಪಕ್ಷದ ಮುಖಂಡರುಗಳು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಹಾಗೂ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

ಈ ವೇಳೆ ಮಾತನಾಡಿದ ಕೆ.ಭರತ್ ಜನಪರವಾಗಿ ಹಲವಾರು ವರ್ಷಗಳಿಂದ ನೊಂದವರ ಪರ ಹೋರಾಟ ಮಾಡುತ್ತಿದು. ಆದರೆ ಬಿಜೆಪಿಯ ಕೆಲವರು ನ್ಯಾಯ ಪರವಾದ ಹೋರಾಟವನ್ನು ಸಹಿಸಲಾರದೇ ತಮ್ಮ ಮೇಲೆ ಮೊಕದ್ದಮೆ ದಾಖಲಿಸಿ ಕಿರುಕೂಳ ನೀಡಿಸದರು ಎಂದು ಬೇಸರ ವ್ಯಕ್ತಪಡಿಸಿದರು.

ಇಷ್ಟೆಲ್ಲಾ ಸಾಮಾಜಿಕ ಕಳಕಳಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾರ್ವಜನಿಕರ ಸೇವೆಗೆ ತಮ್ಮನ್ನು ತಾವು ಸಮರ್ಪಣೆ ಮಾಡಿಕೊಳ್ಳಲಾಗಿದ್ದು. ಆದರೆ ಅನಿವಾರ್ಯ ಕಾರಣಗಳಿಂದ ಸ್ವಲ್ಪ ಸಮಯ ರಾಜಕೀಯದಿಂದ ದೂರವಿದ್ದು ಇದೀಗ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ. ಇನ್ನೂ ಮುಂದಿನ ದಿನಗಳಲ್ಲಿ ಪಕ್ಷವನ್ನು ಕ್ಷೇತ್ರದಲ್ಲಿ ಹೆಚ್ಚಿನ ಮಟ್ಟದಲ್ಲಿ ಸಂಘಟಿಸಲು ಪ್ರಯತ್ನಿಸುತ್ತೇನೆ ಎಂದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಅತ್ಯಂತ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುವ ಜೊತೆಗೆ ಮತದಾನ ಕೊನೆಯ ದಿನದವರೆಗೂ ಚುರುಕಿನಿಂದ ಕೆಲಸ ಮಾಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ತರಲು ಸನ್ನದ್ದರಾಗಿರುವುದಾಗಿ ತಿಳಿಸಿದರು.
ಇದೇ ವೇಳೆ ಆಮ್‌ಆದ್ಮಿ, ಬಿಎಸ್ಪಿ ಸೇರಿದಂತೆ ವಿವಿಧ ಪಕ್ಷದ ಮುಖಂಡರುಗಳು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಕಾಂಗ್ರೆಸ್ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್, ಉಪಾಧ್ಯಕ್ಷ ಕೆ.ಎಸ್.ಶಾಂತೇಗೌಡ, ಮಾಜಿ ಅಧ್ಯಕ್ಷ ಡಾ. ಡಿ.ಎಲ್.ವಿಜಯ್ ಕುಮಾರ್, ಎಂ.ಎಲ್.ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಜಿ.ಪಂ. ಮಾಜಿ ಅಧ್ಯಕ್ಷರಾದ ಎ.ಎನ್.ಮಹೇಶ್, ಕೆ.ಮಹಮ್ಮದ್, ವಕ್ತಾರ ರೂಬೆನ್ ಮೋಸಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು