ಚಿಕ್ಕಮಗಳೂರು: 10 ಲಕ್ಷ ರೂ. ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

ಚಿಕ್ಕಮಗಳೂರು: ಹಲವು ಅಭಿವೃದ್ಧಿ ಕಾರ್ಯಗಳು ಎಲ್ಲಾ ವಾರ್ಡ್‌ಗಳಲ್ಲಿ ನಡೆಯುತ್ತಿದೆ. ನಗರಸಭೆ ಆವರಣದಲ್ಲಿ ೧೦ ಲಕ್ಷ ರೂ. ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಇಂದು ಚಾಲನೆ ನೀಡಿದ್ದೇವೆ ಎಂದು  ಶಾಸಕ ಸಿ.ಟಿ.ರವಿ  ಹೇಳಿದರು.

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು ಅವರು ಅಮೃತ್ ಯೋಜನೆ, ಒಳಚರಂಡಿ ಯೋಜನೆ ಕಾಮಗಾರಿಗಳು ಸಹ ಗಡುವಿನೊಳಗೆ ಹಸ್ತಾಂತರಿಸಲಿದ್ದಾರೆ. ಅದಕ್ಕೆ ಬೇಕಾದ ಕೆಲಸ ಆಗ್ತಿದೆ ಎಂದರು. ನಾಲ್ಕನೇ ಹಂತದ ನಗರೋತ್ಥಾನ ಕಾಮಗಾರಿ ಮುಂದಿನ ವಾರದಿಂದ ಪ್ರಾರಂಭವಾಗುತ್ತದೆ. ಇದರ ಜೊತೆಗೆ ಎಲ್‌ಇಡಿ ಬಲ್ಬ್ ಅಳವಡಿಸುವ ಕಾರ್ಯವೂ ನಡೆಯುತ್ತಿದೆ ಎಂದರು.

ಬೀದಿ ಬದಿ ವ್ಯಾಪಾರಸ್ಥರಿಗೆ ಪ್ರಧಾನ ಮಂತ್ರಿ ಸ್ವಧಿ ಯೋಜನೆಯಡಿ 785 ಫಲಾನುಭವಿಗಳಿಗೆ ತಲಾ 10 ಸಾವಿರ ರೂ. ಹಾಗೂ 824 ಫಲಾನುಭವಿಗಳಿಗೆ ತಲಾ ಹತ್ತು ಸಾವಿರ ಸೇರಿ 1.36 ಕೋಟಿ ರೂ.ಗಳನ್ನು ಆತ್ಮ ನಿರ್ಭರಕ್ಕಾಗಿ ನೀಡಿದೆ. ಅವರು ಸೂಕ್ತ ಸಮಯದಲ್ಲಿ ಮರುಪಾವತಿ ಮಾಡಿದರೆ ಎರಡು ಪಟ್ಟು ಸಾಲ ಪಡೆಯಲು ಅರ್ಹರಾಗುತ್ತಾರೆ. 1 ಲಕ್ಷ ರೂ.ವರೆಗೆ ಸಾಲ ಪಡೆಯಲು ಸಾಧ್ಯವಿದೆ ಎಂದರು.

ಇದು ಬೀದಿ ಬದಿ ವ್ಯಾಪಾರಸ್ಥರಿಗೆ ಒಂದು ಸುವರ್ಣಾವಕಾಶ. ಇದನ್ನು ಬಳಸಿಕೊಳ್ಳಬೇಕು. ಮೊಬೈಲ್ ಸಂಖ್ಯೆ, ಆಧಾರ್ ಕಾರ್ಡ್ ಕೊಟ್ಟರೆ ಸಾಕು ಬಂಡವಾಳ ವೆಚ್ಚವಾಗಿ ನೆರವು ಸಿಗಲಿದೆ. ಮೊದಲು ಇವರೆಲ್ಲರೂ ಖಾಸಗಿಯವರಲ್ಲಿ ಮೀಟರ್ ಬಡ್ಡಿಯಲ್ಲಿ ಸಾಲ ಪಡೆದು ತಿಂಗಳಿಗೆ ಶೇ.೩೦೦ ರಷ್ಟು ಬಡ್ಡಿ ಕೊಡಬೇಕಿತ್ತು. ಆ ರೀತಿ ಆಗಬಾರದು, ದುಡಿಯುವ ವರ್ಗಕ್ಕೆ ನೆರವಾಗಬೇಕು ಎನ್ನುವ ಕಾರಣಕ್ಕೆ ಯೋಜನೆ ಬಂದಿದೆ. ಸಾಲ ಪಡೆದು ಮೋಸ ಮಾಡಿದರೆ ಜೀವನದಲ್ಲಿ ಮುಂದೆ ಯಾವುದೇ ಕಾರಣಕ್ಕೆ ಸಾಲ ಪಡೆಯಲು ಸಾಧ್ಯವಿರುವುದಿಲ್ಲ ಎಂದರು.

Ashika S

Recent Posts

ಚಾಮರಾಜನಗರ: ಜನ ಜಾನುವಾರುಗಳಿಗೆ ನೀರು, ಮೇವು ವಿತರಣೆ

ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳ  ಮೇವಿಗೆ ಯಾವುದೇ ಕೊರತೆಯಾಗದಂತೆ ಜಿಲ್ಲಾಡಳಿತ ವತಿಯಿಂದ…

8 mins ago

ವರುಣನ ಅಬ್ಬರಕ್ಕೆ ತುಂಬಿ ಹರಿದ ಕೆರೆ ಕಟ್ಟೆಗಳು

ವರುಣನ ಅಬ್ಬರಕ್ಕೆ ಕೆರೆಕಟ್ಟೆಗಳು ಭರ್ತಿಯಾಗಿದ್ದು, ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರು, ತಾಯೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ…

10 mins ago

ಕೆಲ ಬಿಜೆಪಿ ಕಾರ್ಯಕರ್ತರಿಂದ ಚುನಾವಣಾ ಆಯೋಗದ ನಿಯಮ ಉಲ್ಲಂಘನೆ

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು, ಚುನಾವಣಾ ಆಯೋಗದ ನಿಯಮಗಳನ್ನ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ನಿನ್ನೆಯಷ್ಟೇ ತಸ್ವೀ‌ರ್ ಎಂಬುವ ವ್ಯಕ್ತಿ…

23 mins ago

ಫೋಟೋ ತೆಗೆಯಲು ಬಂದ ಅಭಿಮಾನಿಗೆ ಥಳಿಸಿದ ಶಕಿಬ್ ಅಲ್ ಹಸನ್‌

ಬಾಂಗ್ಲಾದೇಶದ ಕ್ರಿಕೆಟ್​ ತಂಡದ ಹಿರಿಯ ಆಲ್​ರೌಂಡರ್​ ಶಕಿಬ್ ಅಲ್ ಹಸನ್‌ ಸೆಲ್ಫಿ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಥಳಿಸಲು ಮುಂದಾಗಿರುವ…

40 mins ago

ಹೆಚ್​​ಡಿ ರೇವಣ್ಣಗೆ ಮೇ 14ರವರೆಗೆ ನ್ಯಾಯಾಂಗ ಬಂಧನ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​​ಡಿ ರೇವಣ್ಣ ಅವರಿಗೆ ಏಳು ದಿನದವರೆಗೆ ಅಂದರೆ ಮೇ…

51 mins ago

ಸರ್ಕಾರಿ ಆಸ್ಪತ್ರೆಯ ಕಾರಿಡಾರ್​ನಲ್ಲಿ ನರ್ಸ್ ವೊಬ್ಬರು ಸ್ಕೂಟಿಯಲ್ಲಿ ಓಡಾಟ

ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ವೊಬ್ಬರು ಕಪ್ಪು ಕನ್ನಡಕ ಹಾಕಿಕೊಂಡು ಒಂದು ವಾರ್ಡ್​ನಿಂದ ಮತ್ತೊಂದು ವಾರ್ಡ್​ನ ರೋಗಿಗಳ ಬಳಿ ಸ್ಕೂಟಿಯಲ್ಲಿ ಹೋಗಿ  ಚಿಕಿತ್ಸೆ…

1 hour ago