News Karnataka Kannada
Tuesday, May 07 2024
ಚಿಕಮಗಳೂರು

ಚಿಕ್ಕಮಗಳೂರು: ಪ್ರಮೋದ್ ಮುತಾಲಿಕ್ ವಿರುದ್ಧ ಬಿಜೆಪಿ ಅಭ್ಯರ್ಥಿ ಹಾಕದಂತೆ ಶ್ರೀರಾಮಸೇನೆ ಒತ್ತಾಯ

Sri Ram Sene demands bjp not to field candidate against Pramod Muthalik
Photo Credit : News Kannada

ಚಿಕ್ಕಮಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಬಿಜೆಪಿ ಅಭ್ಯರ್ಥಿ ಹಾಕದಂತೆ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸೂಕ್ತ ವ್ಯಕ್ತಿಯೆಂದು ನಿರ್ಧಾರವಾಗಿದೆ. ಹಾಗಾಗಿ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸದೆ ಪ್ರಮೋದ್ ಮುತಾಲಿಕ್ ಅವರನ್ನು ಬೆಂಬಲಿಸುವಂತೆ ಆಗ್ರಹಿಸಿದ್ದಾರೆ. ಒಂದು ವೇಳೆ, ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಹಿಂದೂ ಸಂಘಟನೆಗಳು ಗಂಭೀರ ನಿಲುವು ತೆಗೆದುಕೊಳ್ಳುತ್ತೇವೆ. ಸಿ.ಟಿ ರವಿಯ ವಿರುದ್ಧವೂ ಅಭ್ಯರ್ಥಿಯನ್ನು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮುತಾಲಿಕ್ ೪೭ ವರ್ಷಗಳಿಂದ ಮನೆ ಬಿಟ್ಟು ಬ್ರಹ್ಮಚಾರಿಯಾಗಿ ಸಮಾಜವೇ ಕುಟುಂಬ, ದೇಶವೇ ನನ್ನ ಮನೆ ಎಂದು ದೇಶ, ಧರ್ಮಕ್ಕಾಗಿ ಹೋರಾಡುತ್ತಿದ್ದಾರೆ. ಈ ಹಿಂದೆ ಬಹಳಷ್ಟು ರಾಜಕೀಯ ಅವಕಾಶವಿದ್ದಾಗಲೂ ತಿರಸ್ಕರಿಸಿದ್ದರು. ಭ್ರಷ್ಟಾಚಾರ, ಹಿಂದೂ ವಿರೋಧಿ ನೀತಿ, ಹಿಂದೂ ನಾಯಕರು ಮತ್ತು ಕಾರ್ಯಕರ್ತರ ಕಡೆಗಣನೆ, ಅನವಶ್ಯಕ ದೂರು ದಾಖಲು ಮುಂತಾದ ರೀತಿಯಲ್ಲಿ ವ್ಯವಸ್ಥೆ ಹದಗೆಟ್ಟಿದೆ. ಹಾಗಾಗಿ ಪ್ರಾಮಾಣಿಕ, ಬದ್ಧತೆಯ ಜನಪ್ರತಿನಿಧಿಗಳನ್ನು ಸಮಾಜ ನಿರೀಕ್ಷಿಸುತ್ತಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು