ಚಿಕ್ಕಮಗಳೂರು: ಕಾಂಗ್ರೆಸ್ ನಾಯಕರನ್ನು ಬೆದರಿಸಲು ರಾಜ್ಯ ಸರ್ಕಾರ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯವನ್ನು (ಇ.ಡಿ) ದುರ್ಬಳಕೆ ಮಾಡಿಕೊಳ್ಳುತ್ತಿದೆ. ನಿಮ್ಮ ಬೆದರಿಕೆಗಳಿಗೆ ಹೆದರದೆ ಪಕ್ಷಕ್ಕಾಗಿ ನಾವು ನಮ್ಮ ಪ್ರಾಣವನ್ನು ಅರ್ಪಿಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಜಿಲ್ಲೆಯ ಮೂಡಿಗೆರೆಯಲ್ಲಿ ನ.29ರ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
“ಡಬಲ್ ಇಂಜಿನ್ ಸರ್ಕಾರ ಜನರ ಜೀವನವನ್ನು ನಿರ್ಮಿಸಲು ಕೆಲಸ ಮಾಡಿಲ್ಲ. ಕಳೆದ ಮೂರು ವರ್ಷಗಳಿಂದ ಅಧಿಕಾರದಲ್ಲಿರುವ ರಾಜ್ಯ ಸರ್ಕಾರವು ಜನರ ಜೀವನವನ್ನು ಬದಲಾಯಿಸುವ ಯಾವುದೇ ಕಾರ್ಯಕ್ರಮವನ್ನು ಕೈಗೊಳ್ಳುತ್ತಿಲ್ಲ ಮತ್ತು ಪ್ರತಿದಿನ ಜನರ ಜೇಬಿನಿಂದ ಕದಿಯಲು ಪ್ರಯತ್ನಿಸುತ್ತಿದೆ” ಎಂದು ಅವರು ಹೇಳಿದರು.