ಕೊಪ್ಪ/ಕಡೂರು: ಚುನಾವಣಾ ಆಯೋಗ ಮೇ ೧೦ ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸಿದ್ದು, ನಾಮಪತ್ರ ಸಲ್ಲಿಕೆ ಆರಂಭವಾದ ಮೊದಲ ದಿನವೇ ಜಿಲ್ಲೆಯ ಇಬ್ಬರು ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ಬಿಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್ ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಿ ಎನ್ ಜೀವರಾಜ್ ಅವರು ಮೊದಲ ದಿನವೇ ತಮ್ಮ ಉಮೇದುವಾರಿಗೆ ಸಲ್ಲಿಸಿದ್ದಾರೆ. ಬೆಳ್ಳಿ ಪ್ರಕಾಶ್ ಅವರು ತಮ್ಮ ಪತ್ನಿ ಕವಿತಾ, ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ. ರವಿ ಜೊತೆ ತೆರಳಿ ಕಡೂರು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಇನ್ನು ಮಾಜಿ ಶಾಸಕ, ಶೃಂಗೇರಿ ಅಭ್ಯರ್ಥಿ ಡಿ ಎನ್ ಜೀವರಾಜ್ ಕೊಪ್ಪದಲ್ಲಿ ತಾಲ್ಲೂಕು ಕಚೇರಿಯಲ್ಲಿ ಕ್ಷೇತ್ರ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ತಾಲೂಕು ಕಚೇರಿ ಹೊರಬಾಗದಲ್ಲಿ ಸೇರಿದ್ದ ಕಾರ್ಯಕರ್ತರು ಜೀವರಾಜ್ ಪರ ಘೋಷಣೆ ಕೂಗಿದರು. ಅದಕ್ಕು ಮುನ್ನ ಬೆಳಿಗ್ಗೆ ಹಿಂಬರವಳ್ಳಿ ಗಣಪತಿ, ವೀರಭದ್ರ, ಅರಳಿಕಟ್ಟೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಜೀವರಾಜ್ ಪತ್ನಿ ಹಾಗೂ ಆಪ್ತರು ಇದ್ದರು.