News Karnataka Kannada
Friday, May 10 2024
ಚಿಕಮಗಳೂರು

ಚಿಕ್ಕಮಗಳೂರು: ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ

Chikkamagaluru: Voting awareness by sweep committee
Photo Credit : News Kannada

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ೨೦೨೩ರ ಅಂಗವಾಗಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಮೂಡಿಗೆರೆ ತಾಲ್ಲೂಕು ಸ್ವೀಪ್ ಸಮಿತಿಯ ವತಿಯಿಂದ ನಿನ್ನೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮೂಡಿಗೆರೆ ತಾಲ್ಲೂಕು ಪಂಚಾಯಿತಿ ಕಛೇರಿಯಿಂದ ತಾಲ್ಲೂಕು ಕಛೇರಿಯ ವರೆಗೆ ಕಾಲು ನಡಿಗೆ ಜಾಥ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮತದಾನದ ಬಗ್ಗೆ ಮಹತ್ವ ಸಾರುವ ಘೋಷ ವ್ಯಾಖ್ಯೆಗಳನ್ನು ಸಾರಲಾಯಿತು. ನಂತರ ಲಯನ್ಸ್ ವೃತ್ತದ ಬಳಿ ಮಾನವ ಸರಪಳಿಯನ್ನು ನಿರ್ಮಿಸಿ, ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಕೆ.ಎನ್. ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯ ಕ್ಷರು ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಜಿ. ಪ್ರಭು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು ಆರ್.ಒ ಸಹಾಯಕ ನಿರ್ದೇಶಕರು ಹಾಗೂ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಸ್ವಸಹಾಯ ಸಂಘದ ಸದಸ್ಯರುಗಳು, ವಿಶೇಷ ಚೇತನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು