ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಜೋಗಣ್ಣನಕೆರೆ ಗ್ರಾಮದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ 7ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.
ಸೃಷ್ಟಿ (13) ಮೃತ ವಿದ್ಯಾರ್ಥಿನಿ. ಈಕೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತವಾಗಿ ಕುಸಿದುಬಿದ್ದಿದ್ದಾಳೆ. ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕಿ ಸೃಷ್ಟಿ ಸಾವನ್ನಪ್ಪಿದ್ದಾಳೆ